ಸಾಂದರ್ಭಿಕ ಚಿತ್ರ
ರಾಜ್ಯ
ಹೆಸ್ಕಾಂ ನಿರ್ಲಕ್ಷ್ಯ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಒಂದೇ ಕುಟುಂಬದ ನಾಲ್ವರ ದುರ್ಮರಣ
ನಿನ್ನೆ ಸಂಜೆ ಭಾರೀ ಮಳೆ ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಒಂದೇ ಕುಟುಂಬದ ನಾಲ್ಕು ಮಂದಿ ಹಾಗೂ ಎರಡು ಎತ್ತುಗಳು ದಾರುಣವಾಗಿ ...
ಬೆಳಗಾವಿ: ನಿನ್ನೆ ಸಂಜೆ ಭಾರೀ ಮಳೆ ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಒಂದೇ ಕುಟುಂಬದ ನಾಲ್ಕು ಮಂದಿ ಹಾಗೂ ಎರಡು ಎತ್ತುಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಬಿ. ತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ,
ನಿನ್ನೆ ಸಂಜೆ ಗ್ರಾಮದಲ್ಲಿ ಭಾರೀ ಪ್ರಮಾಣದಲ್ಲಿ ಗಾಳಿ ಬೀಸಿತ್ತು, ಈ ಹಿನ್ನೆಲೆಯಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು, ಇಂದು ಬೆಳಗ್ಗೆ ಜಮೀನಿಗೆ ಮೃತರ ಕುಟುಂಬ ತೆರಳಿತ್ತು, ಈ ವೇಳೆ ತಂತಿ ತುಳಿದು ಸಾವನ್ನಪ್ಪಿದ್ದಾರೆ. ರೇವಪ್ಪ ಕಲ್ಲೋಳಿ, ರತ್ನವ್ವ ಕಲ್ಲೋಳಿ, ಸಚಿನ್ ಹಾಗೂ ಕೃಷ್ಣ ಮೃತ ದುರ್ದೈವಿಗಳು,
ವಿದ್ಯುತ್ ತಂತಿ ಸರಿಪಡಿಸುವಂತೆ ಹೆಸ್ಕಾಂಗೆ ದೂರು ನೀಡಲಾಗಿತ್ತು, ಆದರು ಜನರ ಮನವಿಗೆ ಹೆಸ್ಕಾಂ ಸ್ಪಂದಿಸಿರಲಿಲ್ಲ, ಸ್ಥಳಕ್ಕೆ ಹೆಸ್ಕಾಂ ಅಧಿಕಾರಿಗಳು ಬರುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ, ಈ ಸಂಬಂಧ ಕಟಕೊಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ