ವಿಜಯಪುರ: ಭೀಮಾ ನದಿಗೆ ಸ್ನಾನಕ್ಕೆ ತೆರಳಿದ್ದ ಮೂವರು ನೀರುಪಾಲು

ಭೀಮಾ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದ ಮೂವರು ನೀರುಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ವಿಜಯಪುರ: ಭೀಮಾ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದ ಮೂವರು ನೀರುಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.
ವಿಜಯಪುರ ಜಿಲ್ಲೆ ಚಡಚಣ ತಾಲೂಕು ಮರಗೂರ ಗ್ರಾಮದ ಸಮೀಪ ಯುಗಾದಿ ಹಬ್ಬದ ಅಂಗವಾಗಿ ಭೀಮಾ ನದಿಯಲ್ಲಿ ಸ್ನಾನಕ್ಕಿಳಿದಿದ್ದ ಮೂವರು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಮೃತರಲ್ಲಿ ಅಂಜುಟಗಿ ಗ್ರಾಮದ ಓರ್ವನಿದ್ದರೆ ಇನ್ನಿಬ್ಬರು ಮಹಾರಾಷ್ಟ್ರದ ಔದ್ ಗ್ರಾಮದವರೆಂದು ಗುರುತಿಸಲಾಗಿದೆ.
ಮೂವರೂ ನದಿಯಲ್ಲಿ ಮುಳುಗುತ್ತಿರುವುದನ್ನು ನೋಡಿದ ಸ್ಥಳೀಯರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಪೋಲೀಸರು ಸ್ಥಳೀಯರ ನೆರವಿನೊಡನೆ ಶವಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಘಟನೆಯು ಝಳಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com