ಬೆಂಗಳೂರು: ಉದ್ಯಮಿಯೊಬ್ಬರ ಮಗನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಜೈಲಿಗೆ ಹೋಗಿ ಬಂದಿದ್ದ ಶಾಂತಿನಗರದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಇದೀಗ ಆರ್ಸಿಬಿ ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ತಮ್ಮ ಬೆಂಬಲಿಗರೊಂದಿಗೆ ಸೇರಿಕೊಂಡು ಚೌಕಿದಾರ್ ಚೋರ್ ಹೈ ಎಂದು ಘೋಷಣೆ ಕೂಗಿರುವ ವಿಡಿಯೋ ಇದೀಗ ವೈರಲ್ ಆಗಿದೆ.