ವಿಶ್ವೇಶ್ವರಯ್ಯ ತಾಂತ್ರಿಕ ವಿ.ವಿ ಅಧೀನ ಕಾಲೇಜುಗಳಲ್ಲಿ ಉದ್ಯಮ ಕೇಂದ್ರಗಳ ಸ್ಥಾಪನೆ

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ಅಧೀನದಲ್ಲಿರುವ ಎಲ್ಲಾ ಎಂಜಿನಿಯರಿಂಗ್ ...
ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯ
ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯ
ಬೆಂಗಳೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ಅಧೀನದಲ್ಲಿರುವ ಎಲ್ಲಾ ಎಂಜಿನಿಯರಿಂಗ್ ಕಾಲೇಜುಗಳಿಗೆ ತಮ್ಮ ಕ್ಯಾಂಪಸ್ ಗಳಲ್ಲಿ ಉದ್ಯಮ ಕೇಂದ್ರವನ್ನು ಸ್ಥಾಪಿಸುವಂತೆ ಸೂಚಿಸಲಾಗಿದೆ.
ಎಂಜಿನಿಯರಿಂಗ್ ಪದವಿ ವಿದ್ಯಾರ್ಥಿಗಳಿಗೆ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಇಂಟರ್ನಿಷಿಪ್ ಕಡ್ಡಾಯ ಮಾಡಿದ ಹಿನ್ನಲೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ ತನ್ನ ಅಧೀನದಲ್ಲಿರುವ ಕಾಲೇಜುಗಳಿಗೆ ಉದ್ಯಮ ಕೇಂದ್ರವನ್ನು ಸ್ಥಾಪಿಸುವಂತೆ ಹೇಳಿದೆ.
ಇಲ್ಲಿ ಎಂಜಿನಿಯರಿಂಗ್ ಪದವಿ ವಿದ್ಯಾರ್ಥಿಗಳು ಪ್ರಾಯೋಗಿಕ ಅನುಭವ ಪಡೆಯಬಹುದು. ಖಾಸಗಿ ಕೈಗಾರಿಕೆಗಳು ಅಥವಾ ಉದ್ಯಮಗಳ ಜೊತೆ ಕೈಜೋಡಿಸಿ ಕಾಲೇಜುಗಳು ಉದ್ಯಮ ಕೇಂದ್ರಗಳನ್ನು ಸ್ಥಾಪಿಸಬಹುದು.. ಇದು ಕಡ್ಡಾಯವಲ್ಲದಿದ್ದರೂ ಕೂಡ ವಿದ್ಯಾರ್ಥಿಗಳಿಗೆ ಹೆಚ್ಚು ಅವಕಾಶ ನೀಡಲು ಎಲ್ಲಾ ಕಾಲೇಜುಗಳಿಗೆ ಉದ್ಯಮ ಕೇಂದ್ರವನ್ನು ಸ್ಥಾಪಿಸುವಂತೆ ಸುತ್ತೋಲೆ ಹೊರಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com