ಏ.15ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಸಿ.ಶಿಖಾ ಮಾಹಿತಿ
ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಏಪ್ರಿಲ್ 15 ರಂದು ಸೋಮವಾರ ಪ್ರಕಟಿಸಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿ.ಶಿಖಾ ಹೇಳಿದ್ದಾರೆ.
ಸೋಮವಾರ ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಫಲಿತಾಂಶವನ್ನು ಬಹಿರಂಗಪಡಿಸಲಾಗುವುದು, ಮಂಗಳವಾರ ಎಲ್ಲಾ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಇದಕ್ಕೂ ಮುನ್ನ ಕೆಲ ಮಾಧ್ಯಮಗಳು ಏಪ್ರಿಲ್ 17ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ವರದಿ ಮಾಡಿದ್ದವು. ಆದರೆ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದದ್ದು ಎಂದು ಶಿಖಾ ಹೇಳಿದ್ದಾರೆ
ಮೌಲ್ಯಮಾಪನದ ಬಳಿಕ ಅಂಕಗಳನ್ನು ಆನ್ ಲೈನ್ ಮೂಲಕ ಸರ್ವರ್ ಗೆ ಸೇರಿಸುವ ಕ್ರಮದಿಂದಾಗಿ ಈ ಬಾರಿ ಫಲಿತಾಂಶ ಬೇಗ ಪ್ರಕಟಿಸಲು ಸಾಧ್ಯವಾಗಲಿದೆ. ಸೋಮವಾರ ಅಧಿಕೃತವಾಗಿ ಫಲಿತಾಂಶ ಪ್ರಕಟಿಸುವುದಾಗಿ ಅವರು ತಿಳಿಸಿದ್ದಾರೆ.
2019ನೇ ಸಾಲಿನಲ್ಲಿ 6.73 ಲಕ್ಷ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆ ಬರೆದಿದ್ದಾರೆ. ಇದರಲ್ಲಿ ಒಟ್ಟು 1.94 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಹಾಜರಾಗಲು ನೋಂದಾಯಿಸಿಕೊಂಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ