ಅಂತೆಯೇ ಬೈಕ್ ಗುದ್ದಿದ ರಭಸಕ್ಕೆ ಓಮ್ನಿ ಕಾರು ಕೂಡ ಪಲ್ಟಿಯಾಗಿದ್ದು, ಕಾರಿನಲ್ಲಿದ್ದವರಿಗೂ ಗಾಯಗಳಾಗಿವೆ. ಗಾಯಾಳುಗಳನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳೀಯರು ನೀಡಿರುವ ಮಾಹಿತಿಯಂತೆ ಅಪಘಾತಕ್ಕೆ ಬೈಕ್ ಸವಾರರ ನಿರ್ಲಕ್ಷ್ಚವೇ ಕಾರಣ ಎಂದು ಹೇಳಲಾಗಿದ್ದು, ಓಮ್ನಿ ಕಾರು ಕೂಡ ವೇಗವಾಗಿ ಚಲಿಸುತ್ತಿತ್ತು ಎಂದು ಪ್ರತ್ಯಕ್ಷ ದರ್ಶಿಗಳು ಹೇಳಿದ್ದಾರೆ.