ಬೆಂಗಳೂರು: ರಾಜಧಾನಿ ಬೆಂಗಳೂರಿನ ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆತಿದೆ. ತಿಗಳರ ಪೇಟೆಯಲ್ಲಿರುವ ಧರ್ಮರಾಯ ಸ್ವಾಮಿ ದೇವಾಲಯದಿಂದ ಹೂವುಗಳಿಂದ ಅಲಂಕರಿಸಿದ ಕರಗವನ್ನು ಹೊತ್ತು ಅರ್ಚಕ ಮನು ನಾಗರಾಜ್ ಸಾಗಿದರು. ಸಹಸ್ರಾರು ಸಂಖ್ಯೆಯ ಭಕ್ತಾಧಿಗಳು ಕರಗವನ್ನು ಕಣ್ತುಂಬಿಕೊಂಡರು.
ಉದ್ದನೆ ಕತ್ತಿ ಹಿಡಿದ ವೀರಕುಮಾರರು ಆಕರ್ಷಣೆಯ ಕೇಂದ್ರವಾಗಿದ್ದರು.ಎಲ್ಲೆಲ್ಲೂ ಗೋವಿಂದಾ ಗೋವಿಂದಾ ನಾಮಸ್ಮರಣೆ ಮುಗಿಲು ಮುಟ್ಟಿತ್ತು ಭಾವೈಕ್ಯದ ಸಂಕೇತವಾದ ಹಿಂದೂಗಳ ಜತೆಗೂಡಿ ಮುಸ್ಲಿಂ ಜನಾಂಗದವರೂ ಕರಗದ ಉತ್ಸವದಲ್ಲಿ ಪಾಲ್ಗೊಂಡು ತಮ್ಮ ಭಾವೈಕ್ಯತೆ ಮೆರೆದರು. ಶಾಂತಿನಗರ ಶಾಸಕ ಹ್ಯಾರಿಸ್ ಕೂಡಾ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾಗಿ ಟ್ವಿಟ್ ಮಾಡಿದ್ದಾರೆ.
ತಿಗಳರಪೇಟೆಯ ಧರ್ಮರಾಯಸ್ವಾಮಿ ದೇವಳದಿಂದ ಹೊರಟ ಕರಗದ ಮೆರವಣಿಗೆಯು ಆಂಜನೇಯ ಸ್ವಾಮಿ ದೇವಸ್ಥಾನ ರಸ್ತೆ, ಅವೆನ್ಯೂ ರಸ್ತೆ, ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ರಸ್ತೆ, ಪೊಲೀಸ್ ರಸ್ತೆ, ರಾಣಾಸಿಂಗ್ ಪೇಟೆ ರಸ್ತೆ, ಕಾಟನ್ ಪೇಟೆ, ಮಸ್ತಾನ್ ಸಾಬ್ ದರ್ಗಾ, ಬಳೇಪೇಟೆ, ಅಣ್ಣಮ್ಮ ದೇವಸ್ಥಾನ, ಕಿಲಾರಿ ರಸ್ತೆ, ಮೈಸೂರು ಬ್ಯಾಂಕ್ ವೃತ್ತ, ಕುಂಬಾರ ಪೇಟೆ, ಕಬ್ಬನ್‌ಪೇಟೆ ಮಾರ್ಗವಾಗಿ ಪುನಃ ತಿಗಳರಪೇಟೆಗೆ ಬಂದು ಸೇರಲಿದೆ
ಕರಗದ ವೇಳೆ ಯಾವುದೇ ಅನಾಹುತ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಭಾರೀ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
Advertisement