ಮಹೇಶ್ ವಿಕ್ರಮ್ ಹೆಗ್ಡೆ
ರಾಜ್ಯ
ಪೋಸ್ಟ್ ಕಾರ್ಡ್ ನ್ಯೂಸ್ ಸಂಪಾದಕ ಮಹೇಶ್ ವಿಕ್ರಮ್ ಹೆಗ್ಡೆ ಮತ್ತೊಮ್ಮೆ ಬಂಧನ
ಪೋಸ್ಟ್ ಕಾರ್ಡ್ ನ್ಯೂಸ್ ವೆಬ್ ಸೈಟ್ ನ ಸಹ ಸಂಸ್ಥಾಪಕ ಮಹೇಶ್ ವಿಕ್ರಮ್ ಹೆಗ್ಡೆಯನ್ನು ಬಂಧಿಸಲಾಗಿದೆ...
ಮಡಿಕೇರಿ: ಪೋಸ್ಟ್ ಕಾರ್ಡ್ ನ್ಯೂಸ್ ವೆಬ್ ಸೈಟ್ ನ ಸಹ ಸಂಸ್ಥಾಪಕ ಮಹೇಶ್ ವಿಕ್ರಮ್ ಹೆಗ್ಡೆಯನ್ನು ಬಂಧಿಸಲಾಗಿದೆ. ಕುಟುಂಬದ ಸಮಾರಂಭಕ್ಕೆಂದು ಮಡಿಕೇರಿಯ ವಿರಾಜಪೇಟೆಯಲ್ಲಿರುವ ಖಾಸಗಿ ರೆಸಾರ್ಟ್ ಗೆ ಬಂದಿದ್ದ ವೇಳೆ ಮಹೇಶ್ ನನ್ನು ಬಂಧಿಸಲಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.
ಗೃಹ ಸಚಿವ ಎಂ ಬಿ ಪಾಟೀಲ್ ಅವರು ನೀಡಿದ್ದ ದೂರಿನ ಮೇಲೆ ಮಹೇಶ್ ಅವರನ್ನು ಬಂಧಿಸಲಾಗಿದೆ. ಲಿಂಗಾಯತ ಧರ್ಮ ಇಬ್ಭಾಗ ವಿಚಾರಕ್ಕೆ ಸಂಬಂಧಪಟ್ಟಂತೆ ನ್ಯೂಸ್ ವೆಬ್ ಸೈಟ್ ನಲ್ಲಿ ತಮ್ಮ ಹೆಸರಿನಲ್ಲಿ ನಕಲಿ ಪತ್ರವನ್ನು ಪ್ರಕಟಿಸಿದ್ದಾರೆ ಎಂದು ಮಹೇಶ್ ವಿಕ್ರಮ್ ವಿರುದ್ಧ ಸಚಿವ ಎಂ ಬಿ ಪಾಟೀಲ್ ಕಳೆದ ಏಪ್ರಿಲ್ 16ರಂದು ವಿಜಯಪುರದಲ್ಲಿ ಕೇಸು ದಾಖಲಿಸಿದ್ದರು. ನಿನ್ನೆಯ ಮಹೇಶ್ ಬಂಧನದಲ್ಲಿ ವಿಜಯಪುರ ಜಿಲ್ಲಾ ಪೊಲೀಸರು ಭಾಗಿಯಾಗಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ