ಬೆಂಗಳೂರು: ಬೈಕ್‌ಗೆ ಬಸ್‌ ಢಿಕ್ಕಿ; ಪತ್ನಿ ಸಾವು, ಪತಿಗೆ ಗಂಭೀರ ಗಾಯ

ಬೆಂಗಳೂರು-ಹೊಸೂರು ಹೆದ್ದಾರಿಯ ಚಂದಾಪುರ ಮೇಲ್ಸೇತುವೆ ರಸ್ತೆಯಲ್ಲಿ ವೇಗವಾಗಿ ಬಂದ ಬಸ್ಸೊಂದು ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಪತ್ನಿ ಸ್ಥಳದಲ್ಲೇ ಮೃತಪಟ್ಟರೆ ಪತಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಬೆಂಗಳೂರು: ಬೆಂಗಳೂರು-ಹೊಸೂರು ಹೆದ್ದಾರಿಯ ಚಂದಾಪುರ ಮೇಲ್ಸೇತುವೆ ರಸ್ತೆಯಲ್ಲಿ ವೇಗವಾಗಿ ಬಂದ ಬಸ್ಸೊಂದು ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಪತ್ನಿ ಸ್ಥಳದಲ್ಲೇ ಮೃತಪಟ್ಟರೆ ಪತಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.
ಮೃತ ಮಹಿಳೆಯನ್ನು ನೆರಳೂರಿನ ರೇಣುಕಾ (25 ವರ್ಷ) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ರೇಣುಕಾ ಅವರ ಪತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಮೃತ ರೇಣುಕಾ ಪತಿಯೊಂದಿಗೆ ನೆರಳೂರಿನಲ್ಲಿ ವಾಸವಿದ್ದರು. ಆಂಧ್ರದ ಚಿತ್ತೂರು ಜಿಲ್ಲೆಯ ಮದನಪಲ್ಲಿ ಮೂಲದವರಾದ ದಂಪತಿ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದರು.
ಪೊಲೀಸ್ ಮೂಲಗಳು ತಿಳಿಸಿರುವಂತೆ ಹೊಸೂರಿನಿಂದ ಬೆಂಗಳೂರಿಗೆ ಹೊರಟಿದ್ದ ತಮಿಳುನಾಡಿಗೆ ಸೇರಿದ ಬಸ್ ಮಾರ್ಗಮಧ್ಯೆ ಚಂದಾಪುರ ಮೇಲುಸೇತುವೆ ರಸ್ತೆಯಲ್ಲಿ ಮುಂದೆ ಹೋಗುತ್ತಿದ್ದ ಬೈಕ್‍ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ಕೆಳಗೆ ಬಿದ್ದಿದ್ದು ಅವರ ಮೇಲೆ ಮತ್ತೊಂದು ಬಸ್ ಹರಿದ ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಅಪಘಾತ ನಡೆದ ಸ್ಥಳಕ್ಕೆ ಸೂರ್ಯ ಸಿಟಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com