ಸಾವಿಗೂ 2 ದಿನ ಮುಂಚಿತವಾಗಿಯೇ ಡೆತ್ ನೋಟ್ ಬರೆದಿದ್ದ ಸಿದ್ಧಾರ್ಥ್!

ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರ ಸಾವು ಹಲವು ಪ್ರಶ್ನೆಗಳನ್ನು ಸೃಷ್ಟಿ ಮಾಡಿದ್ದು, ಸಿದ್ಧಾರ್ಥ್ ಸಾವಿಗೂ 2 ಮುನ್ನವೇ ತಮ್ಮ ಡೆತ್ ನೋಟ್ ಬರೆದಿದ್ದರು ಎಂಬ ವಿಚಾರ ಬೆಳಕಿಗೆ ಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಬೆಂಗಳೂರು: ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರ ಸಾವು ಹಲವು ಪ್ರಶ್ನೆಗಳನ್ನು ಸೃಷ್ಟಿ ಮಾಡಿದ್ದು, ಸಿದ್ಧಾರ್ಥ್ ಸಾವಿಗೂ 2 ಮುನ್ನವೇ ತಮ್ಮ ಡೆತ್ ನೋಟ್ ಬರೆದಿದ್ದರು ಎಂಬ ವಿಚಾರ ಬೆಳಕಿಗೆ ಬಂದಿದೆ.
ಮುಂಬೈ ಮೂಲದ ಫೈನಾನ್ಸ್ ಸಂಸ್ಥೆಯಿಂದ ಸಿದ್ಧಾರ್ಥ್ ಸಾವಿರಾರು ಕೋಟಿ ರೂ ಸಾಲ ಪಡೆದು, ಆದೇ ಫೈನಾನ್ಸ್ ಸಂಸ್ಥೆಯಿಂದ ಸಿದ್ಧಾರ್ಥ್ ಕಿರುಕುಳ ಅನುಭವಿಸಿದ್ದರು. ಕಿರುಕುಳ ತಾಳಲಾರದೇ ಸಿದ್ಧಾರ್ಥ್ ಆತ್ಮಹತ್ಯೆಗೆ ಮುಂದಾಗಿದ್ದರು. ಈ ಸಂಬಂಧ ಜುಲೈ 27ರಂದು ಡೆತ್ ನೋಟ್ ಬರೆದಿಟ್ಟಿದ್ದ ಸಿದ್ಧಾರ್ಥ್, ಆ ಪತ್ರದಲ್ಲಿ ಆರ್ಥಿಕ ಒತ್ತಡ ಮತ್ತು ತೆರಿಗೆ ಇಲಾಖೆಯ ಅಧಿಕಾರಿಗಳ ಕಿರುಕುಳದ ಕುರಿತು ಉಲ್ಲೇಖ ಮಾಡಿದ್ದರು. ಅಲ್ಲದೆ ತಮ್ಮ ಸಿಬ್ಬಂದಿಗಳಿಗೆ ನನ್ನಿಂದ ತೊಂದರೆಯಾಗಬಾರದು ಎಂದು ಆಶಿಸಿದ್ದರು.
ಡಿಕೆ ಶಿವಕುಮಾರ್ ಭೇಟಿಗೆ ಮುಂದಾಗಿದ್ದ ಸಿದ್ಧಾರ್ಥ್
ಇನ್ನು ಸಿದ್ಧಾರ್ಥ್ ಆತ್ಮಹತ್ಯೆಗೂ ಮುನ್ನ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಲು ಮುಂದಾಗಿದ್ದ ವಿಚಾರ ಕೂಡ ಬೆಳಕಿಗೆ ಬಂದಿದೆ. ಜುಲೈ 27ರಂದು ಪತ್ರ ಬರೆದಿದ್ದ ಸಿದ್ಧಾರ್ಥ್ 28ರಂದು ಡಿಕೆಶಿ ಭೇಟಿಗೆ ಮುಂದಾಗಿದ್ದರು. ಆದರೆ ಕಾರಣಾಂತರಗಳಿಂದ ಅದು ಸಾಧ್ಯವಾಗಿರಲಿಲ್ಲ. ಇದೇ ವಿಚಾರವಾಗಿ ಡಿಕೆ ಶಿವಕುಮಾರ್ ಕೂಡ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com