ಶ್ರೀರಂಗಪಟ್ಟಣ: ತಾಯಿಯ ಅಸ್ಥಿ ವಿಸರ್ಜನೆ ವೇಳೆ ಕಾವೇರಿ ನದಿಯಲ್ಲಿ ಕೊಚ್ಚಿ ಹೋದ ಬೆಂಗಳೂರು ವ್ಯಕ್ತಿ!

ತಾಯಿಯನ್ನು ಕಳೆದುಕೊಂಡ ನೋವಿನ ನಡುವೆ ಅಸ್ಥಿ ವಿಸರ್ಜನೆಗಾಗಿ ಶ್ರೀರಂಗಪಟ್ಟಣಕ್ಕೆ ತೆರಳಿದ್ದ ಬೆಂಗಳೂರಿನ ವ್ಯಕ್ತಿಯೋರ್ವ ಕಾವೇರಿ ನದಿಯಲ್ಲಿ ಕೊಚ್ಚಿ ಕೊಂಡು ಹೋಗಿರುವ ಹೃದಯ ವಿದ್ರಾವಕ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಮಂಡ್ಯ: ತಾಯಿಯನ್ನು ಕಳೆದುಕೊಂಡ ನೋವಿನ ನಡುವೆ ಅಸ್ಥಿ ವಿಸರ್ಜನೆಗಾಗಿ ಶ್ರೀರಂಗಪಟ್ಟಣಕ್ಕೆ ತೆರಳಿದ್ದ ಬೆಂಗಳೂರಿನ ವ್ಯಕ್ತಿಯೋರ್ವ ಕಾವೇರಿ ನದಿಯಲ್ಲಿ ಕೊಚ್ಚಿ ಕೊಂಡು ಹೋಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. 
42 ವರ್ಷದ ಶ್ರೀಕಾಂತ್ ಎಂಬುವರು ಸಂಬಂಧಿಕರೊಂದಿಗೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಗಂಜಾಂ ಸಮೀಪದ ಸಂಗಮ ಬಳಿ ತಾಯಿ ಅಸ್ಥಿಯನ್ನು ವಿಸರ್ಜನೆ ಮಾಡಲು ತೆರಳಿದ್ದರು. ಈ ವೇಳೆ ಅಲೆಗಳ ರಭಸಕ್ಕೆ ಕಾವೇರಿ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.
ನಂತರ ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರ ತೆಗೆದಿದ್ದಾರೆ. ಶ್ರೀರಂಗಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com