ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ರಾಜ್ಯ
10 ದಿನದೊಳಗೆ ರೈತರ ಖಾತೆಗೆ 2 ಸಾವಿರ ರೂ. ಜಮಾ: ಮುಖ್ಯಮಂತ್ರಿ ಯಡಿಯೂರಪ್ಪ
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಎರಡು ಕಂತುಗಳಲ್ಲಿ 4 ಸಾವಿರ ರೂಪಾಯಿ ನೀಡಲು ತೀರ್ಮಾನಿಸಲಾಗಿದ್ದು, ಶೀಘ್ರದಲ್ಲಿಯೇ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ
ಬೆಂಗಳೂರು: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಫಲಾನುಭವಿಯಾಗಿರುವ ರಾಜ್ಯದ 31. 72 ಲಕ್ಷ ರೈತರಿಗೆ ತಲಾ 2 ಸಾವಿರ ರೂಪಾಯಿಗಳನ್ನು 10 ದಿನಗಳ ಒಳಗಾಗಿ ಅವರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ವಿಧಾನಸೌಧದಲ್ಲಿಂದು ನಡೆದ ಹಿರಿಯ ಅಧಿಕಾರಿಗಳು, ಪ್ರಾದೇಶಿಕ ವಿಭಾಗಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಅಧಿಕಾರಿಗಳಿಗೆ ಈ ಕುರಿತು ಮುುಖ್ಯಮಂತ್ರಿ ಸೂಚನೆ ನೀಡಿದ್ದಾರೆ.
ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 43. 75 ಲಕ್ಷ ಫಲಾನುಭವಿಗಳ ಪಟ್ಟಿಯನ್ನು ಕಳುಹಿಸಲಾಗಿದೆ. ಈ ಪೈಕಿ ಅರ್ಹ 31.72 ಲಕ್ಷ ಫಲಾನುಭವಿ ರೈತರಿಗೆ ಕೇಂದ್ರಸರ್ಕಾರದಿಂದ 6 ಸಾವಿರ ಹಾಗೂ ರಾಜ್ಯ ಸರ್ಕಾರದಿಂದ 4 ಸಾವಿರ ರೂಪಾಯಿ ನೀಡುವುದರಿಂದ ರಾಜ್ಯದ ರೈತರಿಗೆ ವಾರ್ಷಿಕ 10 ಸಾವಿರ ರೂಪಾಯಿ ಸಿಗಲಿದೆ ಎಂದು ಹೇಳಿದರು.
ಈ ಫಲಾನುಭವಿಗಳಿಗೆ ರಾಜ್ಯ ಸರ್ಕಾರದ ವತಿಯಿಂದ ಮೊದಲ ಕಂತಾಗಿ 2 ಸಾವಿರ ರೂಪಾಯಿ ಹಣವನ್ನು 10 ದಿನಗಳ ಒಳಗಾಗಿ ಅವರ ಖಾತೆಗೆ ಜಮೆ ಮಾಡಲಾಗುವುದು ಎಂದು ಅವರು ಪ್ರಕಟಿಸಿದ್ದಾರೆ.ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿಹಾರ ಧನ ಬಿಡುಗಡೆಗೆ ತೊಂದರೆಯಾಗದಂತೆ ಜಿಲ್ಲಾಧಿಕಾರಿಗಳ ಪಿ. ಡಿ ಖಾತೆಯಿಂದಲೇ ಭರಿಸುವಂತೆ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ