ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯಪುರ ಮತ್ತು ಬೆಳಗಾವಿ ಜಿಲ್ಲೆಗಳ ಹಲವು ಗ್ರಾಮಗಳು ಜಲಾವೃತವಾಗಿದ್ದು, ಈಗಾಗಲೇ ತುರ್ತು ಪರಿಹಾರ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪರಿಸ್ಥಿತಿಯನ್ನು ಅವಲೋಕಿಸಲು ನಾಳೆ ಬೆಳಗ್ಗೆ ಈ ಎರಡು ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗುವುದು. ನಿರಾಶ್ರಿತ ಕೇಂದ್ರಗಳಿಗೂ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಲಾಗುವುದು ಎಂದು ಅವರು ತಿಳಿಸಿದರು.