ಬೆಂಗಳೂರು: ಬೈಕ್ ಗೆ ಕಾರು ಡಿಕ್ಕಿ; ಸವಾರ ಸಾವು, ಮತ್ತೋರ್ವನಿಗೆ ಗಾಯ

ಬೈಕ್‍ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ಬಳ್ಳಾರಿ ರಸ್ತೆಯ ಬ್ಯಾಟರಾಯನಪುರ ಸಿಗ್ನಲ್ ಬಳಿ ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ಬೆಂಗಳೂರು: ಬೈಕ್‍ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ಬಳ್ಳಾರಿ ರಸ್ತೆಯ ಬ್ಯಾಟರಾಯನಪುರ ಸಿಗ್ನಲ್ ಬಳಿ ನಿನ್ನೆ ಮಧ್ಯೆ ನಡೆದಿದೆ.
ಜಕ್ಕೂರಿನ ಮಧುಸೂದನ್ (35) ಮೃತಪಟ್ಟವರು. ಗಾಯಗೊಂಡಿರುವ ಅವರ ಸ್ನೇಹಿತ ಕುಮಾರ್ (34) ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾರು ಚಾಲಕನಾಗಿದ್ದ ಮಧುಸೂದನ್ ಹಾಗೂ ಕುಮಾರ್ ಇಬ್ಬರು ರಾತ್ರಿ 1 ಗಂಟೆ ವೇಳೆ ಕೆಲಸ ಮುಗಿಸಿಕೊಂಡು ಹೆಬ್ಬಾಳದ ಕಡೆಯಿಂದ ಜಕ್ಕೂರಿನ ಮನೆಗೆ ಬೈಕ್‍ನಲ್ಲಿ ಹೋಗುತ್ತಿದ್ದರು. ಮಾರ್ಗ ಮಧ್ಯೆ ಬ್ಯಾಟರಾಯನಪುರ ಸಿಗ್ನಲ್ ಬಳಿ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ.
ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಧುಸೂದ್‍ನನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಗಾಯಗೊಂಡಿದ್ದ ಹಿಂಬದಿ ಸವಾರ ಕುಮಾರ್ ಎಂಬವರನ್ನು  ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಬ್ಬಾಳ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com