ಬೆಂಗಳೂರು: ಕೃಷ್ಣ ಕೊಳ್ಳದ ವಿವಿಧ ಪ್ರದೇಶಗಳಲ್ಲಿ ಉಂಟಾಗಿರುವ ಪ್ರವಾಹದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಕಾಂಗ್ರೆಸ್ ಮುಖಂಡ ಎಚ್.ಕೆ ಪಾಟೀಲ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.
ಈ ಸಂಬಂಧ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಎಚ್.ಕೆ ಪಾಟೀಲ್, ಸ್ಥಳೀಯವಾಗಿ ನಾವು ಸರಿಪಡಿಸಲು ಆಗುವುದಿಲ್ಲ, ಇದೊಂದು ದೊಡ್ಡ ಸವಾಲು, ಹೀಗಾಗಿ ತಾವು ಇಲ್ಲಿಗೆ ಭೇಟಿ ನೀಡಿ ಪರಿಶೀಲನೆ ಮಾಡಬೇಕೆಂದು ಒತ್ತಾಯಿಸಿದ್ದಾರೆ,
ಬೆಳಗಾವಿ ವಿಭಾಗ ಪ್ರವಾಹ ಪೀಡಿತ ತಂಡದ ಅಧ್ಯಕ್ಷರನ್ನಾಗಿ ಕಾಂಗ್ರೆಸ್ ಎಚ್.ಕೆ ಪಾಟೀಲ್ ಅವರನ್ನು ನೇಮಿಸಿದೆ,ನಾವು ಪರಿಹಾರ ಕಾರ್ಯಾಚರಣೆಗಳನ್ನು ಪರಿಶೀಲಿಸುತ್ತೇವೆ ಮತ್ತು ಹೆಚ್ಚಿನ ಸಹಾಯದ ಅಗತ್ಯವಿದೆಯೇ ಎಂಬ ಬಗ್ಗೆ ಪಕ್ಷಕ್ಕೆ ವರದಿ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ.
ಮಲೆನಾಡು, ಕರಾವಳಿ, ಉತ್ತರ ಕರ್ನಾಟಕ, ಸೇರಿದಂತೆ 12 ಜಿಲ್ಲೆಗಳ 70 ಗ್ರಾಮಗಳು ಸಂಪೂರ್ಣ ಜಲಾವೃತವಾಗಿದ್ದು ನೂರಾರು ಮಂದಿ ನಾಪತ್ತೆಯಾಗಿದ್ದಾರೆ,. ಹೀಗಾಗಿ ಕೇಂದ್ರ ಸರ್ಕಾರ ಕೂಡಲೇ ಪರಿಹಾರ ಕಾರ್ಯ ಆರಂಭಿಸಬೇಕು ಎಂದು ಒತ್ತಾಯಿಸಿದ್ದಾರೆ.
ತರು ಬೆಳೆದ ಬೆಳೆಗಳು ಕೂಡ ಹಾಳಾಗಿವೆ. ಮುಧೋಳ ತಾಲ್ಲೂಕಿನ ಘಟಪ್ರಭಾ ನದಿ ತೀರದ ಧವಳೇಶ್ವರ ನಂದಗಾವ್ ಹಾಗೂ ಮಿರ್ಜಿ ಸೇತುವೆಗಳ ಮೇಲೆ ನೀರು ಹರಿಯುತ್ತಿದ್ದು , ಸಂಚಾರ ಸ್ಥಗಿತಗೊಂಡಿದೆ. ಇದಲ್ಲದೆ ಜಮಖಂಡಿ ತಾಲ್ಲೂಕಿನ ಮುತ್ತೂರು ಕನಕವಾಡಿ ಕೂಡ ಪ್ರವಾಹದಿಂದ ಸಂಪರ್ಕ ಕಡಿತಗೊಂಡಿದೆ.
ರಾಯಚೂರು ಜಿಲ್ಲೆ ಲಿಂಗಸಗೂರು , ಹೂವಿನ ಹಡಗಲಿ ಸೇರಿದಂತೆ ಹಲವೆಡೆ ಜನರು ಆತಂಕಗೊಂಡಿದ್ದಾರೆ. ಇಲ್ಲಿನ ಐತಿಹಾಸಿಕ ದೇವಾಲಯಗಳು ಕೂಡ ಜಲಾವೃತಗೊಂಡಿದ್ದು ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿ ಮಾಡಿದ್ದಾರೆ,
ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕೋಯ್ನಾ ಮತ್ತು ವೆರ್ನಾ ಜಲಾಶಯಗಳಿಂದ ಅಧಿಕ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗುತ್ತಿದೆ, ಇದರಿಂದಾಗಿ ಕರ್ನಾಟಕದ ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳು ಭರ್ತಿಯಾಗಿವೆ ಎಂದು ವಿವರಿಸಿದ್ದಾರೆ.