ಜಿಲ್ಲೆಯ ಪ್ರವಾಹ ಬಾಧಿತ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಚಿಕ್ಕೋಡಿಯ ಪ್ರವಾಸಿಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳ ಹಿನ್ನೀರಿನಿಂದ ಮಹಾರಾಷ್ಟ್ರದ ಗಡಿ ಜಿಲ್ಲೆಗಳಾದ ಕೊಲ್ಲಾಪುರ ಮತ್ತು ಸಾಂಗ್ಲಿ ಜಿಲ್ಲೆಗಳಲ್ಲಿ ಪ್ರವಾಹಕ್ಕೆ ಕಾರಣವಾಗುತ್ತಿದೆ ಎಂದು ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವ ಮಾಹಿತಿ ತಪ್ಪಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.