ಕರ್ನಾಟಕ ಪ್ರವಾಹ: ನಾಳೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ

ಪ್ರವಾಹದಿಂದ ತತ್ತರಿಸಿ ಹೋಗಿರುವ ಕರ್ನಾಟಕಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಗದಗ: ಪ್ರವಾಹದಿಂದ ತತ್ತರಿಸಿ ಹೋಗಿರುವ ಕರ್ನಾಟಕಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತಂತೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ನಿರ್ಮಲಾ ಸೀತಾರಾಮನ್ ನಾಳೆ ಬೆಳಗಾವಿಗೆ ಆಗಮಿಸಲಿದ್ದು ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಗದಗ ಜಿಲ್ಲೆಯ ಕೊಣ್ಣೂರು ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ ಅವರು, 'ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ ರಾಜ್ಯಕ್ಕೆ ಬರುತ್ತಿದ್ದಾರೆ. ರಾಜ್ಯದಲ್ಲಿ ಪ್ರವಾಹದಿಂದಾಗಿ ಆಗಿರುವ ಅನಾಹುತಗಳ ಬಗ್ಗೆ ಅವರು ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ ಎಂದು ಹೇಳಿದರು. ಅಂತೆಯೇ ಇದೇ ವೇಳೆ ಕೇಂದ್ರ ಸರ್ಕಾರಕ್ಕೆ ವಾಸ್ತವ ವರದಿ ನೀಡಿ ಅನುದಾನಕ್ಕೆ ಬೇಡಿಕೆ ಇಡಲಾಗುವುದು. ಕೇಂದ್ರ ಸರ್ಕಾರ ನಿಮ್ಮೆಲ್ಲರ ಪರವಾಗಿ ಇದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.

ಇದೇ ವೇಳೆ 'ಸದ್ಯಕ್ಕೆ 100 ಕೋಟಿ ರೂ ಹಣ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಸಂತ್ರಸ್ತರಿಗಾಗಿ ಯಾವುದೇ ರೀತಿಯ ಸಹಾಯಕ್ಕೂ ಕೇಂದ್ರ ಸರ್ಕಾರ ಸಿದ್ಧವಿದೆ. ನೆರೆ ಪ್ರಮಾಣ ಕಡಿಮೆಯಾದ ಬಳಿಕ ಅಧಿಕಾರಿಗಳು ಸರ್ವೇ ನಡೆಸಿ ವರದಿ ನೀಡಿದ ಬಳಿಕ ಹೆಚ್ಚಿನ ಕ್ರಮದ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com