ಬಿಬಿಎಂಪಿ ಅಧಿಕಾರಿಗಳಿಗೆ ಎರಡು, ನಾಲ್ಕನೇ ಶನಿವಾರದ ರಜೆ ಇಲ್ಲ; ಎಂ.ಮಂಜುನಾಥ್ ಪ್ರಸಾದ್

ಬಿಬಿಎಂಪಿ ಅಧಿಕಾರಿಗಳಿಗೆ ಎರಡು, ನಾಲ್ಕನೇ ಶನಿವಾರದ ರಜೆ ಇಲ್ಲ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.
ಬಿಬಿಎಂಪಿ ಅಧಿಕಾರಿಗಳಿಗೆ ಎರಡು, ನಾಲ್ಕನೇ ಶನಿವಾರದ ರಜೆ ಇಲ್ಲ; ಎಂ.ಮಂಜುನಾಥ್ ಪ್ರಸಾದ್
Updated on: 

ಬೆಂಗಳೂರು: ಬಿಬಿಎಂಪಿ ಅಧಿಕಾರಿಗಳಿಗೆ ಎರಡು, ನಾಲ್ಕನೇ ಶನಿವಾರದ ರಜೆ ಇಲ್ಲ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.


ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್, 'ಬೆಂಗಳೂರು ನಗರದಲ್ಲಿ ಮಳೆಯಿಂದ ಯಾವುದೇ ಹಾನಿಯಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿರುವುದಾಗಿ ಹೇಳಿದರು. ಇದೇ ಕಾರಣಕ್ಕಾಗಿ ಮಳೆಗಾಲ ಮುಗಿಯುವರೆಗೆ ಯಾವುದೇ ಅಧಿಕಾರಿಗಳು ಹೆಚ್ಚುವರಿ ರಜೆ ಪಡೆಯುವಂತಿಲ್ಲ ಎಂದು ಆದೇಶಿಸಿದ್ದಾರೆ.


ಮಳೆಗಾಲದಲ್ಲಿ ಏನಾದರೂ ಸಮಸ್ಯೆಗಳು ಎದುರಾದಾಗ ಅದನ್ನು ಪರಿಹರಿಸಲು ಅಧಿಕಾರಿಗಳು ಸಿದ್ಧರಿರಬೇಕು. ಆದ್ದರಿಂದ ಅಧಿಕಾರಿಗಳು ಹೆಚ್ಚುವರಿ ರಜೆ ಹಾಕಿ ನಗರದಿಂದ ಹೊರ ಹೋಗುವಂತಿಲ್ಲ . ಜೊತೆಗೆ, ಎರಡು ಮತ್ತು ನಾಲ್ಕನೇ ಶನಿವಾರದ ರಜೆಯನ್ನು ಕೂಡ ರದ್ದು ಮಾಡಲಾಗಿದೆ. ತುರ್ತು ಸಂದರ್ಭದಲ್ಲಿ ಮಾತ್ರ ಆಯುಕ್ತರ ಅನುಮತಿ ಮೇರೆಗೆ ರಜೆ ಪಡೆಯಬಹುದು ಎಂದರು. 


ಸಿಬ್ಬಂದಿ, ಅಧಿಕಾರಿಗಳಿಗೆ ರಜೆ ನೀಡುವ ವಿಶೇಷ ಅಧಿಕಾರ ನನ್ನ ಬಳಿ ಇದೆ. ಆದ್ದರಿಂದ ನನ್ನ ಸಮ್ಮತಿ ಇದ್ದರೆ ಮಾತ್ರ ಅವರು ರಜೆ ಪಡೆಯಬಹುದು. ಪಾಲಿಕೆ ಅಧಿಕಾರಿಗಳು ದಿನದ 24 ಗಂಟೆಯೂ ಸೇವೆ ಒದಗಿಸಲು ಸಿದ್ಧರಿರಬೇಕು ಎಂದು ತಿಳಿಸಿದರು. ಇದೇ ವೇಳೆ ನಗರದ ಎಲ್ಲ ಮೆಟ್ರೋ ನಿಲ್ದಾಣಗಳಲ್ಲೂ ಪಾವತಿ ಮಾಡಿ ಬಳಕೆ ಮಾಡುವ ಶೌಚಾಲಯಗಳನ್ನು ನಿರ್ಮಿಸುವುದಾಗಿಯೂ ಮಂಜುನಾಥ್ ಪ್ರಸಾದ್ ಹೇಳಿದರು. ಇದಕ್ಕಾಗಿ ಎನ್ ಜಿಒಗಳೊಂದಿಗೆ ತಾವು ಚರ್ಚೆ ನಡೆಸಿದ್ದು, ಶೀಘ್ರದಲ್ಲೇ ಈ ಕುರಿತು ಅಂತಿಮ ನಿರ್ಣಯ ಕೈಗೊಳ್ಳುವುದಾಗಿ ಹೇಳಿದರು.


ಪ್ರತಿ ನಿತ್ಯ ಲಕ್ಷಾಂತರ ಮಂದಿ ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದಾರೆ. ನಿಲ್ದಾಣದ ಹೊರಗೆ ಸೂಕ್ತ ಶೌಚಾಲಯದ ವ್ಯವಸ್ಥೆ ಆಗಬೇಕಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com