ಹಾಸನ: ಬೈಕ್‍ಗೆ ಕಾರು ಡಿಕ್ಕಿ, ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ದುರ್ಮರಣ

ಬೈಕ್‍ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಮೃತಪಟ್ಟಿರುವ ಘಟನೆ ಹೊಳೆನರಸೀಪುರ ತಾಲೂಕಿನ ಸಿಗರನಹಳ್ಳಿ ಬಳಿ ಇಂದು ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಹಾಸನ: ಬೈಕ್‍ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಮೃತಪಟ್ಟಿರುವ ಘಟನೆ ಹೊಳೆನರಸೀಪುರ ತಾಲೂಕಿನ ಸಿಗರನಹಳ್ಳಿ ಬಳಿ ಇಂದು ನಡೆದಿದೆ.

ಸಿಗರನಹಳ್ಳಿ ನಿವಾಸಿಗಳಾದ ಉಮೇಶ್(23) ಹಾಗೂ ಹರೀಶ್(22) ಮೃತಪಟ್ಟ ಯುವಕರು. ಹಾಸನ ನಗರದಿಂದ ಬೈಕ್ ನಲ್ಲಿ ಹೊಳೆನರಸೀಪುರ ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು, ಕಾರು ಚಾಲಕನಿಗೂ ಗಂಭೀರವಾಗಿ ಗಾಯವಾಗಿದೆ.

ಸುದ್ದಿ ತಿಳಿದ ತಕ್ಷಣ ಹೊಳೆನರಸೀಪುರ ನಗರ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com