
ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರು ದಸರಾವನ್ನು ಈ ಬಾರಿ ಖ್ಯಾತ ಸಾಹಿತಿ, ಕಾದಂಬರಿಕಾರ ಡಾ. ಎಸ್.ಎಲ್ ಭೈರಪ್ಪ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಮೈಸೂರು ದಸರಾ ಉತ್ಸವದ ಕುರಿತಾಗಿ ಉನ್ನತ ಮಟ್ಟದ ಸಭೆ ನಡೆಯಿತು.
ಪ್ರಸ್ತುತ ಕರ್ನಾಟಕ ಪ್ರವಾಹ ಪರಿಸ್ಥಿತಿಗೆ ತುತ್ತಾಗಿದ್ದು ಈ ಹಿನ್ನೆಲೆಯಲ್ಲಿ ಸರಳವಾಗಿ ದಸರಾ ಆಚರಣೆಗೆ ತೀರ್ಮಾನಿಸಲಾಯಿತು. ಇನ್ನು ದಸರಾ ಉದ್ಘಾಟನೆಗೆ ಎಸ್ಎಲ್ ಭೈರಪ್ಪನವರಿಗೆ ಆಹ್ವಾನ ನೀಡಲು ಸಭೆಯಲ್ಲಿ ನಿರ್ಧರಿಸಲಾಯಿತು.
Advertisement