ನೆರೆ ಪರಿಹಾರಕ್ಕೆ ಐದು ಸಾವಿರ ಕೋಟಿ ರೂ. ಸಾಲುವುದಿಲ್ಲ- ಡಿ. ಸಿ. ತಮ್ಮಣ್ಣ 

ರಾಜ್ಯದ ನೆರೆ ಸಂತ್ರಸ್ತರ ಪರಿಹಾರಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕೇಂದ್ರ ಸರ್ಕಾರದ ಬಳಿ ಮನವಿ ಮಾಡಿರುವ 5 ಸಾವಿರ ಕೋಟಿ ರೂಪಾಯಿ ಅನುದಾನ ಸಾಕಾಗುವುದಿಲ್ಲ ಎಂದು ಮಾಜಿ ಸಚಿವ ಡಿ. ಸಿ. ತಮ್ಮಣ್ಣ ಹೇಳಿದ್ದಾರೆ.
ನೆರೆ ಪರಿಹಾರಕ್ಕೆ ಐದು ಸಾವಿರ ಕೋಟಿ ರೂ. ಸಾಲುವುದಿಲ್ಲ- ಡಿ. ಸಿ. ತಮ್ಮಣ್ಣ 

ಹುಬ್ಬಳ್ಳಿ: ರಾಜ್ಯದ ನೆರೆ ಸಂತ್ರಸ್ತರ ಪರಿಹಾರಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕೇಂದ್ರ ಸರ್ಕಾರದ ಬಳಿ ಮನವಿ ಮಾಡಿರುವ 5 ಸಾವಿರ ಕೋಟಿ ರೂಪಾಯಿ ಅನುದಾನ ಸಾಕಾಗುವುದಿಲ್ಲ ಎಂದು ಮಾಜಿ ಸಚಿವ ಡಿ. ಸಿ. ತಮ್ಮಣ್ಣ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹದಿಂದ ಸಾವಿರಾರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಆದ್ದರಿಂದ ಡಿ ಸಿ ತಮ್ಮಣ್ಣ ಸೇವಾ ಪ್ರತಿಷ್ಠಾನ ವತಿಯಿಂದ ನೆರೆ ಸಂತ್ರಸ್ತರಿಗಾಗಿ ಆರು ಲಾರಿಗಳಲ್ಲಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ಆಹಾರ ಪದಾರ್ಥಗಳು ಹಾಗೂ ಸಾಮಾಗ್ರಿಗಳನ್ನು ರವಾನಿಸಿ ಸಂತ್ರಸ್ತರಿಗೆ ವಿತರಿಸಲಾಗುತ್ತಿದೆ  ಎಂದು ತಿಳಿಸಿದರು.

ನೆರೆ ಹಾನಿಯನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು, ಸದ್ಯದ ಮಟ್ಟಿಗೆ ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ನಿಧಿಯಿಂದ ಶೀಘ್ರವೇ 10 ಸಾವಿರ ಕೋಟಿ ರೂಪಾಯಿ ಅನುದಾನ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com