ಅನ್ನಭಾಗ್ಯ ಯೋಜನೆ ಕಡಿತಗೊಳಿಸುವ ಯಾವುದೇ ಉದ್ದೇಶ ಸರ್ಕಾರದ ಮುಂದಿಲ್ಲ: ಬಿ ಎಸ್ ಯಡಿಯೂರಪ್ಪ

ಅನ್ನಭಾಗ್ಯ ಯೋಜನೆಯಡಿ ನೀಡಲಾಗುತ್ತಿದ್ದ ಅಕ್ಕಿ ಪ್ರಮಾಣವನ್ನು ಕಡಿತ ಮಾಡುವ ಯಾವುದೇ ಯೋಜನೆ ನಮ್ಮ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. 
ಬಿ ಎಸ್ ಯಡಿಯೂರಪ್ಪ
ಬಿ ಎಸ್ ಯಡಿಯೂರಪ್ಪ
Updated on: 

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ನೀಡಲಾಗುತ್ತಿದ್ದ ಅಕ್ಕಿ ಪ್ರಮಾಣವನ್ನು ಕಡಿತ ಮಾಡುವ ಯಾವುದೇ ಯೋಜನೆ ನಮ್ಮ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿರುವ ಅವರು, ಅನ್ನಭಾಗ್ಯ ಯೋಜನೆ ಮುಂದುವರಿಯಲು ನಾನು ಈಗಾಗಲೇ ಸಹಿ ಹಾಕಿದ್ದೇನೆ ಎಂದಿದ್ದಾರೆ.


ಇದಕ್ಕೂ ಮುನ್ನ ಸುದ್ದಿಗೋಷ್ಠಿ ನಡೆಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಅನ್ನಭಾಗ್ಯ ಯೋಜನೆಯ ಏಳು ಕೆ.ಜಿ. ಅಕ್ಕಿಯಲ್ಲಿ ಕಡಿತ ಮಾಡಿದರೆ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆದಂತಾಗುತ್ತದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಈ ಪ್ರಸ್ತಾವನೆಯನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ವಿರೋಧಿಸುತ್ತದೆ. ಇದರ ವಿರುದ್ಧ ನಾವು ಬೀದಿಗಿಳಿದು ಹೋರಾಟ ಮಾಡುತ್ತೇವೆ. ಅಷ್ಟೇ ಅಲ್ಲ, ಸದನದ ಒಳಗೂ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದರು. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com