ಸಚಿವ ಸಂಪುಟ ರಚನೆ ಬೆನ್ನಲ್ಲೇ ನೆರೆ ಸಂತ್ರಸ್ತ ಜಿಲ್ಲೆಗಳಿಗೆ ಉಸ್ತುವಾರಿ ನೇಮಿಸಿದ ಯಡಿಯೂರಪ್ಪ

ಬಿಜೆಪಿ ಸರ್ಕಾರದ ನೂತನ ಸಚಿವ ಸಂಪುಟ ರಚನೆ ಬಳಿಕ ನೆರೆ ಪರಿಹಾರ ಹಾಗೂ ಪುನರ್ವಸತಿ ಕೆಲಸಗಳನ್ನು ತ್ವರಿತವಾಗಿ ಕೈಗೊಳ್ಳಲು ಸಚಿವರು ಜಿಲ್ಲಾ ಪ್ರವಾಸ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚಿಸಿದ್ದಾರೆ. 
ಯಡಿಯೂರಪ್ಪ
ಯಡಿಯೂರಪ್ಪ
Updated on

ಬೆಂಗಳೂರು:  ಬಿಜೆಪಿ ಸರ್ಕಾರದ ನೂತನ ಸಚಿವ ಸಂಪುಟ ರಚನೆ ಬಳಿಕ ನೆರೆ ಪರಿಹಾರ ಹಾಗೂ ಪುನರ್ವಸತಿ ಕೆಲಸಗಳನ್ನು ತ್ವರಿತವಾಗಿ ಕೈಗೊಳ್ಳಲು ಸಚಿವರು ಜಿಲ್ಲಾ ಪ್ರವಾಸ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚಿಸಿದ್ದಾರೆ.

ವಿಧಾನ ಸೌಧದಲ್ಲಿ ತಮ್ಮ ನೇತೃತ್ವದಲ್ಲಿ ನಡೆದ ಸಂಪುಟ ಸಭೆ್ಯಲ್ಲಿ ಈ ಸೂಚನೆ ನೀಡಿದ್ದಾರೆ. ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್ ಸುರೇಶ್ ಕುಮಾರ್ ಹಾಗು ಜೆ ಸಿ ಮಾಧುಸ್ವಾಮಿ, ನಾಳೆಯಿಂದಲೇ ಎಲ್ಲಾ ನೂತನ ಸಚಿವರು ಎರಡು ದಿನಗಳ ಕಾಲ ನೆರೆ ಸಂತ್ರಸ್ತ ಪ್ರದೇಶಗಳಲ್ಲಿ ಪ್ರವಾಸ ಮಾಡುತ್ತಿದ್ದು, ಪರಿಹಾರ ಕಾಮಗಾರಿಗಳ ಪರಿಶೀಲನೆ ನಡೆಸಲಿದ್ದೇವೆ. ಎಲ್ಲಾ ಸಚಿವರಿಗೆ ಜಿಲ್ಲೆಗಳ ಹಂಚಿಕೆ ಮಾಡಲಾಗಿದ್ದು ಸಂಪುಟ ಸಭೆ ಮುಗಿಯುತ್ತಿದ್ದಂತೆಯೇ ನೆರೆ ಪೀಡಿತ ಪ್ರದೇಶಗಳಿಗೆ ತೆರಳುತ್ತಿದ್ದೇವೆ ಎಂದು ಅವರು ತಿಳಿಸಿದರು.

ಬೆಳಗಾವಿ ಜಿಲ್ಲೆಗೆ ಲಕ್ಷ್ಮಣ ಸವದಿ , ಚಿಕ್ಕೋಡಿ ಉಪ ವಿಭಾಗಕ್ಕೆ ಶಶಿಕಲಾ ಜೊಲ್ಲೆ ,ಮೈಸೂರು ಜಿಲ್ಲೆಗೆ ಆರ್.ಅಶೋಕ್, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಕೋಟಾ ಶ್ರೀನಿವಾಸಪೂಜಾರಿ, ಹಾಸನ ಮತ್ತು ಚಿಕ್ಕಮಗಳೂರು ಸಿ.ಟಿ.ರವಿ ಹಾಗೂ ಜೆ ಸಿ ಮಾಧುಸ್ವಾಮಿ ,ಯಾದಗಿರಿ ಜಿಲ್ಲೆಗೆ ಪ್ರಭುಚೌಹಾಣ್, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳಿಗೆ ಶ್ರೀರಾಮುಲು, ಗದಗ ಕೊಪ್ಪಳ ಜಿಲ್ಲೆಗಳಿಗೆ ಸಿಸಿ ಪಾಟೀಲ್, ಕೊಡಗು ಜಿಲ್ಲೆಗೆ ಸುರೇಶ್ ಕುಮಾರ್, ಚಾಮರಾಜನಗರ ಜಿಲ್ಲೆಗೆ ವಿ ಸೋಮಣ್ಣ, ಬಾಗಲಕೋಟೆ ಜಿಲ್ಲೆಗೆ ಈಶ್ವರಪ್ಪ, ವಿಜಯಪುರ ಜಿಲ್ಲೆಗೆ ಗೋವಿಂದ ಕಾರಜೋಳ, ಹಾವೇರಿ ಜಿಲ್ಲೆಗೆ ಬಸವರಾಜ್ ಬೊಮ್ಮಾಯಿ, ಧಾರವಾಡ, ಉತ್ತರ ಕನ್ನಡ ಜಿಲ್ಲೆಗೆ ಜಗದೀಶ್ ಶೆಟ್ಟರ್ ಅವರನ್ನು ನೇಮಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com