ಬಿಬಿಎಂಪಿ ನೂತನ ಆಯುಕ್ತರಾಗಿ ಬಿ.ಎಚ್.ಅನಿಲ್ ಕುಮಾರ್ ನೇಮಕ

ಮಹತ್ವದ ಬೆಳವಣಿಗೆಯೊಂದರಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಅವರನ್ನು ವರ್ಗಾವಣೆಗೊಳಿಸಿ ಗುರುವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬಿಬಿಎಂಪಿ ಕಚೇರಿ
ಬಿಬಿಎಂಪಿ ಕಚೇರಿ
Updated on

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಅವರನ್ನು ವರ್ಗಾವಣೆಗೊಳಿಸಿ ಗುರುವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಬಿ.ಎಚ್. ಅನಿಲ್ ಕುಮಾರ್ ಅವರನ್ನು ಬಿಬಿಎಂಪಿ ನೂತನ ಆಯುಕ್ತರನ್ನಾಗಿ ನೇಮಿಸಲಾಗಿದೆ. ಆದರೆ, ಮಂಜುನಾಥ್ ಪ್ರಸಾದ್ ಅವರಿಗೆ ಯಾವುದೇ ಸ್ಥಳ ನಿಯೋಜನೆ ಮಾಡಿಲ್ಲ.

ಐಎಎಸ್(ವೇತನ ) ನಿಯಮ 2016ರ ನಿಯಮ 12ರ ಅನುಸಾರ, ಬಿಬಿಎಂಪಿ ಆಯುಕ್ತರ ಹುದ್ದೆಯನ್ನು ಮೇಲ್ದರ್ಜೆಗೆ ಏರಿಸಲಾಗಿದ್ದು, ಆಯುಕ್ತರು ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿ ಶ್ರೇಣಿಯ ಸ್ಥಾನಮಾನ ಹಾಗೂ ಜವಾಬ್ದಾರಿಗಳನ್ನು ಹೊಂದಿರುತ್ತಾರೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com