ಮೈಸೂರು ದಸರಾ: ರಾಜ್ಯಸರ್ಕಾರದಿಂದ 18.50 ಕೋಟಿ ರೂ ಬಿಡುಗಡೆ

ಸೆಪ್ಟೆಂಬರ್ 29 ರಿಂದ ನಾಡಹಬ್ಬವಾಗಿ ಆಚರಿಸಲಾಗುವ 10 ದಿನಗಳ ವಿಶ್ವ ಪ್ರಸಿದ್ದ ದಸರಾ ಉತ್ಸವ ಕಾರ್ಯಕ್ರಮಗಳ ವೆಚ್ಚಗಳಿಗಾಗಿ ರಾಜ್ಯ ಸರ್ಕಾರ 18.50 ಕೋಟಿ ರೂಪಾಯಿ ಹಣ ಬಿಡುಗಡೆಗೊಳಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಮೈಸೂರು: ಸೆಪ್ಟೆಂಬರ್ 29 ರಿಂದ ನಾಡಹಬ್ಬವಾಗಿ ಆಚರಿಸಲಾಗುವ 10 ದಿನಗಳ ವಿಶ್ವ ಪ್ರಸಿದ್ದ ದಸರಾ ಉತ್ಸವ ಕಾರ್ಯಕ್ರಮಗಳ ವೆಚ್ಚಗಳಿಗಾಗಿ ರಾಜ್ಯ ಸರ್ಕಾರ 18.50 ಕೋಟಿ ರೂಪಾಯಿ ಹಣ ಬಿಡುಗಡೆಗೊಳಿಸಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಬುಧವಾರ ಹಣ ಬಿಡುಗಡೆ ಸಂಬಂಧ ಸರ್ಕಾರಿ ಆದೇಶ ಹೊರಡಿಸಿದ್ದಾರೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್ ತಿಳಿಸಿದ್ದಾರೆ.

ಮಂಡ್ಯ ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಶ್ರೀರಂಗಪಟ್ಟಣ ಹಾಗೂ ಚಾಮರಾಜ ನಗರ ಜಿಲ್ಲೆಗಳಲ್ಲಿ ನಡೆಯುವ ದಸರಾ ಸಂಬಂಧಿತ ವೆಚ್ಚಗಳೂ ಇದರಲ್ಲಿ ಸೇರಿವೆ ಎಂದು ಅವರು ವಿವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com