ರಾಘವೇಶ್ವರ ಭಾರತಿ ಪ್ರಕರಣ: ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ನ್ಯಾಯಮೂರ್ತಿ 

ಹೊಸನಗರ ರಾಮಚಂದ್ರಾಪುರ ಮಠದಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಆರೋಪಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯಿಂದ ಮುಖ್ಯ ನ್ಯಾಯಮೂರ್ತಿಗಳ ವಿಭಾಗೀಯ ಪೀಠದ ಸಹ ನ್ಯಾಯಮೂರ್ತಿಯಾಗಿದ್ದ ಪಿ.ಎಂ. ನವಾಜ್ ಹಿಂದೆ ಸರಿದಿದ್ದಾರೆ.
ರಾಘವೇಶ್ವರ ಭಾರತಿ ಶ್ರೀ
ರಾಘವೇಶ್ವರ ಭಾರತಿ ಶ್ರೀ

ಬೆಂಗಳೂರು: ಹೊಸನಗರ ರಾಮಚಂದ್ರಾಪುರ ಮಠದಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಆರೋಪಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯಿಂದ ಮುಖ್ಯ ನ್ಯಾಯಮೂರ್ತಿಗಳ ವಿಭಾಗೀಯ ಪೀಠದ ಸಹ ನ್ಯಾಯಮೂರ್ತಿಯಾಗಿದ್ದ ಪಿ.ಎಂ. ನವಾಜ್ ಹಿಂದೆ ಸರಿದಿದ್ದಾರೆ.

ಗುರುವಾರ ಪ್ರಕರಣ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕಾ ಹಾಗೂ ನ್ಯಾಯಮೂರ್ತಿ ಪಿ.ಎಂ. ನವಾಜ್ ಅವರಿದ್ದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಾಗ, ಅವರು ತಾವು ವಿಚಾರಣೆ ಹಿಂದೆ ಸರಿಯುವುದಾಗಿ ಪ್ರಕಟಿಸಿದರು.

ಇದರಿಂದ ಪ್ರಕರಣವನ್ನು ಬೇರೊಂದು ನ್ಯಾಯಪೀಠದ ಮುಂದೆ ವಿಚಾರಣೆಗೆ ನಿಗದಿಪಡಿಸುವಂತೆ ರಿಜಿಸ್ಟ್ರಾರ್ ಗೆ ವಿಭಾಗೀಯ ಪೀಠ ನಿರ್ದೇಶನ ನೀಡಿದೆ. 

ಇಲ್ಲಿಯವರೆಗೆ ರಾಘವೇಶ್ವರ ಭಾರತಿ ಅವರ ವಿರುದ್ಧದ ಒಟ್ಟೂ ಪ್ರಕರಣಗಳಲ್ಲಿ 15 ಜನ ನ್ಯಾಯಮೂರ್ತಿಗಳು ಹಿಂದೆ ಸರಿದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com