ಸಂಗ್ರಹ ಚಿತ್ರ
ರಾಜ್ಯ
ಕೆಪಿಎಲ್ ಮ್ಯಾಚ್ ಫಿಕ್ಸಿಂಗ್: ಬೆಳಗಾವಿ ತಂಡದ ಕೋಚ್ ಮನೆ ಮೇಲೆ ಸಿಸಿಸಿ ದಾಳಿ
ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು, ಬೆಳಗಾವಿ ಪ್ಯಾಂಥರ್ಸ್ ತಂಡದ ಕೋಚ್ ಸುಧೀರ್ ಶಿಂಧೆ ಅವರ ನಿವಾಸದ ಮೇಲೆ ಸೋಮವಾರ ದಾಳಿ ನಡೆಸಿದ್ದಾರೆ.
ಬೆಂಗಳೂರು: ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು, ಬೆಳಗಾವಿ ಪ್ಯಾಂಥರ್ಸ್ ತಂಡದ ಕೋಚ್ ಸುಧೀರ್ ಶಿಂಧೆ ಅವರ ನಿವಾಸದ ಮೇಲೆ ಸೋಮವಾರ ದಾಳಿ ನಡೆಸಿದ್ದಾರೆ.
ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ಸುಧೀರ್ ಅವರು ಪಾತ್ರ ಕಂಡುಬಂದಿರುವ ಹಿನ್ನಲೆಯಲ್ಲಿ ನ್ಯಾಯಾಲಯದ ಅನುಮತಿ ಪಡೆದು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.
ದೊಮ್ಮಲೂರು ಮುಖ್ಯರಸ್ತೆಯಲ್ಲಿರುವ ಸುಧೀರ್ ಅವರ ಮನೆಗೆ ನಿನ್ನೆ ಬೆಳ್ಳಂಬೆಳಿಗ್ಗೆ ಹೋಗಿದ್ದ ಇನ್ಸ್ ಪೆಕ್ಟರ್ ನೇತೃತ್ವದ ತಂಡ ಸಂಜೆವರೆಗೂ ಪರಿಶೀಲನೆ ನಡೆಸಿತು. ಈ ವೇಳೆ ಮನೆಯಲ್ಲಿ ಕೆಲ ದಾಖಲೆಗಳು, ಪೆನ್'ಡ್ರೈವ್'ಗಳನ್ನು ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ.

