ಕೋರಂ ಕೊರತೆ: ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆ ಮುಂದೂಡಿಕೆ
ಬೆಂಗಳೂರು: ಬುಧವಾರ ನಿಗದಿಯಾಗಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ವಿವಿಧ ಸ್ಥಾಯಿ ಸಮಿತಿಗಳ ಚುನಾವಣೆ ಮುಂದೂಡಿಕೆಯಾಗಿದೆ.
ಚುನಾವಣೆಗೆ ಯಾರೂ ನಾಮಪತ್ರ ಸಲ್ಲಿಸದೆ ಇದ್ದುದರಿಂದ ಹಾಗೂ ಒಟ್ಟು ಸದಸ್ಯರ ಬಲವಾದ 256 ರಲ್ಲಿ 1/3 ರಷ್ಟು ಸದಸ್ಯರ ಕೋರಂ ಇಲ್ಲದ ಕಾರಣ ಚುನಾವಣೆಯನ್ನು ಮುಂದೂಡಲಾಗಿದೆ ಎಂದು ಬೆಂಗಳೂರು ಪ್ರಾದೇಶಿಕ ಆಯುಕ್ತ ಹರ್ಷಗುಪ್ತ ಸ್ಪಷ್ಟಪಡಿಸಿದ್ದಾರೆ.
ಪಾಲಿಕೆಯ ಹನ್ನೆರಡು ಸ್ಥಾಯಿ ಸಮಿತಿ ಅಧ್ಯಕ್ಷ ಹಾಗೂ ಸದಸ್ಯ ಸ್ಥಾನಗಳಿಗೆ ಇಂದು ಟೌನ್ ಹಾಲ್ ನಲ್ಲಿ ಚುನಾವಣೆ ನಿಗದಿಯಾಗಿತ್ತು. ಈ ಚುನಾವಣೆಗೆ ಕಳೆದ ನವಂಬರ್ 21ರಂದು ಅಧಿಸೂಚನೆ ಪ್ರಕಟಿಸಲಾಗಿತ್ತು. ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತ ನೇತೃತ್ವದಲ್ಲಿ ಸ್ಥಾಯಿ ಸಮಿತಿ ಚುನಾವಣೆ ನಿಗದಿಯಾಗಿತ್ತು.
12 ಸ್ಥಾಯಿ ಸಮಿತಿ ಸ್ಥಾನಗಳ ಮೇಲೆ ಬಿಜೆಪಿ ಕಣ್ಣಿಟ್ಟಿತ್ತು. ಚುನಾವಣೆಗೆ ಮೂರು ಪಕ್ಷದ ಶಾಸಕರು, ವಿಧಾನ ಪರಿಷತ್ತು ಸದ್ಯಸರು, ಸಂಸದರು, ರಾಜ್ಯಸಭಾ ಸದ್ಯಸರು ಗೈರಾಗಿದ್ದರು. ಚುನಾವಣೆ ನಡೆಯಲು 86 ಸದಸ್ಯ ಬಲಬೇಕು. ಆದರೆ ಕೋರಂ ಕೊರತೆಯಾದ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿದೆ.


