ನಾಳೆ ಉಪ ಕದನ ಫಲಿತಾಂಶ; ದೇವರ ಮೊರೆ ಹೋದ ಬಿಎಸ್‌ವೈ, ದೇವೇಗೌಡ

ಡಿಸೆಂಬರ್5ರಂದು ನಡೆದ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಾಳೆ ನಡೆಯಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉತ್ತಮ ಫಲಿತಾಂಶಕ್ಕಾಗಿ ದೇವರ ಮೊರೆ ಹೋಗಿದ್ದಾರೆ.
ಯಡಿಯೂರಪ್ಪ
ಯಡಿಯೂರಪ್ಪ
Updated on

ಬೆಂಗಳೂರು: ಡಿಸೆಂಬರ್5ರಂದು ನಡೆದ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಾಳೆ ನಡೆಯಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉತ್ತಮ ಫಲಿತಾಂಶಕ್ಕಾಗಿ ದೇವರ ಮೊರೆ ಹೋಗಿದ್ದಾರೆ.

ಸರ್ಕಾರ ಉಳಿಸಿಕೊಳ್ಳಲೇ ಬೇಕು ಎಂಬ ಹಠಕ್ಕೆ ಬಿದ್ದಿರುವ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲು ತೆರಳಿದ್ದಾರೆ.

ಸರ್ಕಾರದ ಉಳಿವಿಗಾಗಿ ಧರ್ಮಸ್ಥಳ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಉತ್ತಮ ಫಲಿತಾಂಶದೊಂದಿಗೆ ಮೂರೂವರೇ ವರ್ಷಗಳ ಕಾಲ ಸರ್ಕಾರ ಯಾವುದೇ ಅಡಚಣೆ, ತೊಂದರೆ ಇಲ್ಲದೆ ಮುಂದುವರಿಯಬೇಕು ಎಂಬ ಉದ್ದೇಶದಿಂದ ಅವರು ಧರ್ಮಸ್ಥಳಕ್ಕೆ ತೆರಳಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿದೆ.

ಇನ್ನು ಉಪಚುನಾವಣೆಗಳಲ್ಲಿ ಜೆಡಿಎಸ್ ಉತ್ತಮ ಸಾಧನೆ ಮಾಡಲಿ ಎಂಬ ಕಾರಣಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಶಿರಡಿ ಸಾಯಿಬಾಬಾ ದರ್ಶನ ಮಾಡಲಿದ್ದಾರೆ. ಭಾನುವಾರ ಸಂಜೆ ಸಾಯಿಬಾಬಾ ದರ್ಶನ ಪಡೆಯುವ ದೇವೇಗೌಂಡರು ಅಲ್ಲಿಂದ ಶನಿ ಸಿಗ್ನಾಪುರದಕ್ಕೆ ತೆರಳಿ ಶನಿದೇವರ ದರ್ಶನ ಮಾಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com