ಪ್ರವಾಸಿ ನಗರಗಳಲ್ಲಿ 5 ಸ್ಟಾರ್ ಹೋಟೆಲ್ ನಿರ್ಮಾಣಕ್ಕೆ ಮುಂದಾದ ಸರ್ಕಾರ
ಬೆಂಗಳೂರು: ಬೇಲೂರು, ಹಂಪಿ ಮತ್ತು ವಿಜಯಪುರ ಸೇರಿದಂತೆ ಪ್ರವಾಸಿ ತಾಣಗಳಿರುವ ನಗರಗಳಲ್ಲಿ 5 ಸ್ಟಾರ್ ಹೋಟೆಲ್ ಗಳನ್ನು ನಿರ್ಮಾಣ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಅಧಿಕಾರ ವಹಿಸಿಕೊಂಡು 100 ದಿನ ಪೂರೈಕೆಯಾಗಿರುವ ಹಿನ್ನಲೆಯಲ್ಲಿ ನಿನ್ನೆ ಹೆಜ್ಜೆ ಗುರುತು ಕಿರು ಹೊತ್ತಗೆ ಬಿಡುಗಡೆ ಮಾಡಿ ಮಾತನಾಡಿರುವ ಪ್ರವಾಸೋದ್ಯ ಸಚಿವ ಸಿಟಿ.ರವಿಯವರು, ವಿಶ್ವ ಐತಿಹಾಸಿಕ ಪಟ್ಟೆಯಲ್ಲಿ ಬೇಲೂರು-ಹಳೇಬೀಡು, ಬಾದಾಮಿ, ಐಹೊಳೆ, ಪಟ್ಟದಕಲ್ಲು ಮತ್ತು ಶ್ರೀರಂಗಪಟ್ಟಣವನ್ನು ಸೇರ್ಪಡೆಗೊಳಿಸಲು ಸರ್ಕಾರ ಪ್ರಸ್ತಾವನೆಯಿಟ್ಟಿದೆ. ಮುಂದಿನ ವರ್ಷದೊಳಗಾಗಿ ಬಿಗ್ ಬಸ್ ಪ್ರವಾಸವನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದ್ದು, ಪ್ರವಾಸಿ ನಗರಗಳಲ್ಲಿ ಫೈವ್ ಸ್ಟಾರ್ ಹೋಟೆಲ್ ನಿರ್ಮಾಣಕ್ಕೂ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ.
8ನೇ ತರಗತಿ ವ್ಯಾಸಾಂಗ ಮಾಡುತ್ತಿರುವ ಸರ್ಕಾರಿ ಶಾಲೆಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳು, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಮಾತ್ರ ಕರ್ನಾಟಕ ಪ್ರವಾಸ ಸೀಮಿತವಾಗಿತ್ತು. ಇದೀಗ ಎಲ್ಲಾ ವರ್ಗಗಳ ವಿದ್ಯಾರ್ಥಿಗಳು ವಿಸ್ತರಿಸಲಾಗಿದೆ. ಪ್ರಸಕ್ತ ವರ್ಷ ವಿಕಲಚೇತನ ವಿದ್ಯಾರ್ಥಿಗಳಿಗೂ ಅವಕಾಶ ಕಲ್ಪಿಸಲಾಗಿದ್ದು, ಮುಂದಿನ ವರ್ಷದಿಂದ ಎಲ್ಲಾ ವರ್ಗಗಳ ವಿದ್ಯಾರ್ಥಿಗಳಿಗೂ ಪ್ರವಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಈ ಮೂಲಕ ಮಕ್ಕಳಲ್ಲಿ ಜಾತಿ ತಾರತಮ್ಯ ಹೋಗಲಾಡಿಸಲಾಗುವುದು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ