ಬೆಂಗಳೂರಿನಲ್ಲಿ ದಾಳಿಗೆ ಸಂಚು: ಉಗ್ರ ಇಮ್ರಾನ್ ಜೀವಾವಧಿ ಶಿಕ್ಷೆ ಎತ್ತಿ ಹಿಡಿದ ಹೈಕೋರ್ಟ್

ವಿಧಾನ ಸೌಧ, ಎಚ್​ಎಎಲ್, ವಿಪ್ರೋ, ಇನ್ಪೋಸಿಸ್ ಸೇರಿ ನಗರದ ಪ್ರಮುಖ ಐಟಿ ಕಂಪನಿಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆ ಸದಸ್ಯ ಇಮ್ರಾನ್ ಜಲಾಲ್​ಗೆ ನೀಡಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ವಿಧಾನ ಸೌಧ, ಎಚ್​ಎಎಲ್, ವಿಪ್ರೋ, ಇನ್ಪೋಸಿಸ್ ಸೇರಿ ನಗರದ ಪ್ರಮುಖ ಐಟಿ ಕಂಪನಿಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆ ಸದಸ್ಯ ಇಮ್ರಾನ್ ಜಲಾಲ್​ಗೆ ನೀಡಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

ಉಗ್ರ ಇಮ್ರಾನ್ ಗೆ ಬೆಂಗಳೂರಿನ 55ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇಮ್ರಾನ್ ಇದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. 

ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಮಳಿಮಠ ಹಾಗೂ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರನ್ನೊಳಗೊಂಡ ವಿಭಾಗೀಯ ಪೀಠ, ಜೀವಾವಧಿ ಶಿಕ್ಷೆಯನ್ನು ಕಾಯಂಗೊಳಿಸಿದೆ.

ಆರೋಪಿಯು ಶಸ್ತ್ರ, ಜೀವಂತ ಗುಂಡು ಮತ್ತು ಗ್ರೆನೇಡ್​ಗಳೊಂದಿಗೆ ಸಿಕ್ಕಿಬಿದ್ದಿದ್ದಾನೆ. ಭಯೋತ್ಪಾದನೆ ಕೃತ್ಯ ಎಸಗಲೆಂದೇ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಎಂಬುದನ್ನು ಸಾಕ್ಷ್ಯಾಧಾರಗಳ ಸಮೇತ ಪ್ರಾಸಿಕ್ಯೂಷನ್ ಸಾಬೀತುಪಡಿಸಿದೆ.

ತನ್ನನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂಬ ಆರೋಪಿ ವಾದಕ್ಕೆ ದಾಖಲೆಗಳು ಇಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com