ಅರವಿಂದ ಲಿಂಬಾವಳಿ ಅಶ್ಲೀಲ ವಿಡಿಯೋ ನಕಲಿ: ವಿಧಿ ವಿಜ್ಞಾನ ಪ್ರಯೋಗಾಲಯ

ಬಿಜೆಪಿ ಮುಖಂಡ ಅರವಿಂದ ಲಿಂಬಾವಳಿಯದ್ದು ಎನ್ನಲಾದ ಅಶ್ಲೀಲ ವಿಡಿಯೊ ನಕಲಿ ಎಂದು ವಿಧಿ ವಿಜ್ಞಾನ ಪ್ರಯೋಗಾಲಯ ಅಧಿಕೃತವಾಗಿ ದೃಢೀಕರಿಸಿದೆ.
ಅರವಿಂದ ಲಿಂಬಾವಳಿ
ಅರವಿಂದ ಲಿಂಬಾವಳಿ

ಬೆಂಗಳೂರು: ಬಿಜೆಪಿ ಮುಖಂಡ ಅರವಿಂದ ಲಿಂಬಾವಳಿಯದ್ದು ಎನ್ನಲಾದ ಅಶ್ಲೀಲ ವಿಡಿಯೊ ನಕಲಿ ಎಂದು ವಿಧಿ ವಿಜ್ಞಾನ ಪ್ರಯೋಗಾಲಯ ಅಧಿಕೃತವಾಗಿ ದೃಢೀಕರಿಸಿದೆ.

ಈ ವಿಡಿಯೋವನ್ನು ವಿಧಿ ವಿಜ್ಞಾನ ಪ್ರಯೋಗಾಲಯ ಇಲಾಖೆ ವೈಜ್ಞಾನಿಕ ಪರೀಕ್ಷೆಗೆ ಒಳಪಡಿಸಿ ನಕಲಿ ವಿಡಿಯೊ ಎಂದು ವರದಿ ನೀಡಿದೆ.

ಸೋಮವಾರ  ವಿಧಿ ವಿಜ್ಞಾನ ಪ್ರಯೋಗಾಲಯ ಅಧಿಕಾರಿಗಳು ಈ ವರದಿಯನ್ನು  ಮಾರತ್ ಹಳ್ಳಿ ಉಪವಿಭಾಗದ ಎಸಿಪಿ ಅವರಿಗೆ ತಿಳಿಸಿದ್ದಾರೆ. ವಿಡಿಯೋದಲ್ಲಿ ಸತ್ಯವಿಲ್ಲ ಎಂದು ಹೇಳಿದೆ

ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಅರವಿಂದ ಲಿಂಬಾವಳಿ ಅವರ ಬಹುಮುಖ್ಯ ಪಾತ್ರವಿದೆ. ಆದರೆ, ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬರುವುದು ಬಿಜೆಪಿ ಪಕ್ಷದ ಒಳಗಿನ ಕೆಲ ನಾಯಕರಿಗೆ ಇಷ್ಟವಿರಲಿಲ್ಲ. ಅವರು ಬೇರೆ ಪಕ್ಷದವರು ಅಧಿಕಾರದಲ್ಲಿ ಇರಲಿ ಎನ್ನುವ ದುರುದ್ದೇಶ ಹೊಂದಿದ್ದರು ಎಂದು ಹೇಳಲಾಗುತ್ತಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com