ಜೀವಂತ ಹೃದಯವನ್ನು ಸಾಗಿಸುತ್ತಿರುವ ವಾಹನ
ಜೀವಂತ ಹೃದಯವನ್ನು ಸಾಗಿಸುತ್ತಿರುವ ವಾಹನ

ಸಾವಿನಲ್ಲೂ ಸಾರ್ಥಕತೆ ಮೆರೆದ ರೈತ: ಅಂಗಾಂಗ ದಾನ ಮಾಡಿ 4 ಜೀವಗಳ ರಕ್ಷಣೆ

ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಿದುಳು ನಿಷ್ಕ್ರಿಯಗೊಂಡಿದ್ದ ರೈತರೊಬ್ಬರು ತಮ್ಮ ಅಂಗಾಂಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. 
Published on

ಬೆಂಗಳೂರು: ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಿದುಳು ನಿಷ್ಕ್ರಿಯಗೊಂಡಿದ್ದ ರೈತರೊಬ್ಬರು ತಮ್ಮ ಅಂಗಾಂಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. 

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ ಡಿ.14 ರಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೈಸೂರಿನ ನಿವೇದಿತಾ ನಗರದ ನಿವಾಸಿಯಾಗಿದ್ದ ಚಂದ್ರಶೇಖರ್ (27) ಎಂಬ ಯುವಕ ಗಂಭೀರವಾಗಿ ಗಾಯಗೊಂಡಿದ್ದರು. ನಂತರ ಯವಕನನ್ನು ಅಪೋಲೋ ಬಿಜಿಎಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. 24 ಗಂಟೆಗಳ ಕಾಲ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಅವರ ಮಿದುಳು ನಿಷ್ಕ್ರಿಯಗೊಂಡಿತ್ತು. ಹೀಗಾಗಿ ಅಂಗಾಂಗ ದಾನ ಪ್ರಕ್ರಿಯೆಗೆ ಅವಕ ಕುಟುಂಬಸ್ಥರು ಸಮ್ಮತಿ ಸೂಚಿಸಿದ್ದರು. 

ಇದರಂತೆ ರೈತನ ಜೀವಂತ ಹೃದಯವನ್ನು ಮೈಸೂರಿನಿಂದ ಗ್ರೀನ್ ಕಾರಿಡಾರ್ ಮೂಲಕ ನಗರದ ರಾಮಯ್ಯ ನಾರಾಯಣ ಹೃದಯ ಕೇಂದ್ರ ಆಸ್ಪತ್ರೆಗೆ ಸಾಗಿಸಿ ರೋಗಿಯೊಬ್ಬರಿಗೆ ವೈದ್ಯರು ಜೋಡಿಸುವಲ್ಲಿ ಯಶಸ್ವಿಯಾದರು. 

ಚಾಮರಾಜನಗರ ಜಿಲ್ಲೆಯ ಹುಡಿಗಾಲ ಗ್ರಾಮದ ಸುಮಾರು 32 ವರ್ಷದ ಶಿವಕುಮಾರ್ ಎಂಬುವವರಿಗೆ ಶಸ್ತ್ರಚಿಕಿತ್ಸೆ ಮೂಲಕ ಹೃದಯವನ್ನು ಜೋಡಿಸಿದ್ದಾರೆ. 

ಶಿವಕುಮಾರ್ ಅವರು ಕಳೆದೆರಡು ವರ್ಷಗಳಿಂದ ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆದುಕೊಳ್ಲುತ್ತಿದ್ದರು. ಕಳೆದ ಕೆಲ ದಿನಗಳಿಂದ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಹೃದಯ ಜೋಡಿಸಲಾಗಿದ್ದು, ಆರೋಗ್ಯವಾಗಿದ್ದಾರೆಂದು ವೈದ್ಯರು ತಿಳಿಸಿದ್ದಾರೆ. 

ಹೃದಯ ಸಾಗಾಣೆ ಸಂಬಂಧ ಬೆಂಗಳೂರು ಮತ್ತು ಮೈಸೂರಿನ ಸಂಚಾರಿ ಪೊಲೀಸರಿಗೆ ಮನವಿ ಮಾಡಲಾಗಿತ್ತು. ಇದಕ್ಕೆ ಸ್ಪಂದಿಸಿದ ಪೊಲೀಸರು ಕೂಡಲೇ ಗ್ರೀನ್ ಕಾರಿಡಾರ್ ವ್ಯವಸ್ಥೆ ಮಾಡಿದ್ದರು. ಪರಿಣಾಮ ಜೀವಂತ ಹೃದಯವನ್ನು 1 ಗಂಟೆ 20 ನಿಮಿಷದಲ್ಲಿ ಮೈಸೂರಿನಿಂದ ಬೆಂಗಳೂರಿಗೆ ರವಾನಿಸಲಾಯಿತು. ರಾಮಯ್ಯ ನಾರಾಯಣ ಹೃದಯ ಕೇಂದ್ರದಲ್ಲಿ ಈ ವರೆಗೂ 30 ಹೃದಯ ಜೋಡಿಸುವ ಶಸ್ತ್ರಚಿಕಿತ್ಸೆ ಮಾಡಿದ್ದು, ಕೇಂದ್ರ ಸರ್ಕಾರದ ಆಯುಷ್ಮಾನ್ ಯೋಜನೆಯಲ್ಲಿ ಇದು ಎರಡನೇ ಪ್ರಕರಣವಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com