ಪೌರತ್ವ ವಿರೋಧಿಸಿ ಪ್ರತಿಭಟನೆ: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡಿ.21ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಜಾರಿ
ಬೆಂಗಳೂರು: ಪೌರತ್ವ ಕಾಯ್ದೆ ವಿರೋಧಿಸಿ ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿರುವುದರಿಂದ ಮುಂಜಾಗೃತ ಕ್ರಮವಾಗಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡಿಸೆಂಬರ್ 21ರವರೆಗೂ ನಿಷೇಧಾಜ್ಞೆ ಹೇರಲಾಗಿದೆ.
ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತ ಕ್ರಮವಾಗಿ ಗುರುವಾರ ಬೆಳಗ್ಗೆ 6 ಗಂಟೆಯಿಂದ ಡಿಸೆಂಬರ್ 21ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಹೇರಲಾಗಿದೆ. ಬೆಂಗಳೂರು, ಮೈಸೂರು, ದಕ್ಷಿಣ ಕನ್ನಡ, ದಾವಣಗೆರೆ, ಬೆಳಗಾವಿ, ಚಿತ್ರದುರ್ಗ, ಹಾಸನ ಸೇರಿದಂತೆ ರಾಜ್ಯದ ಆಯಾ ಜಿಲ್ಲೆಯ ಪೊಲೀಸ್ ಅಧಿಕಾರಿಗಳು, ಜಿಲ್ಲಾಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ 144 ಸೆಕ್ಷನ್ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.
ಇನ್ನು ಬೆಂಗಳೂರಿನಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿದ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ಪ್ರತಿಭಟನೆಗೆ ನಾವು ಅವಕಾಶ ನೀಡಿಲ್ಲ. ಎಂದಿನಂತೆ ಶಾಲಾ ಕಾಲೇಜುಗಳು ನಡೆಯುತ್ತವೆ. ಮಾರುಕಟ್ಟೆಗಳು, ಬಿಎಂಟಿಸಿ, ಕೆಎಸ್ಆರ್ಟಿಸಿಗೆ ನಿರ್ಬಂಧವಿಲ್ಲ ಎಂದು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ