ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ: ಶಾಸಕ ರಿಜ್ವಾನ್ ಆರ್ಶದ್, ಇತಿಹಾಸತಜ್ಞ ರಾಮಚಂದ್ರ ಗುಹಾ ವಿರುದ್ಧ ಕೇಸು ದಾಖಲು

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹಿನ್ನಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದ್ದು ಕಾಂಗ್ರೆಸ್ ಶಾಸಕ ರಿಜ್ವಾನ್ ಆರ್ಶದ್ ಮತ್ತು ಇತಿಹಾಸತಜ್ಞ ರಾಮಚಂದ್ರ ಗುಹಾ ವಿರುದ್ಧ ಕೇಸು ದಾಖಲಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.
ರಾಮಚಂದ್ರ ಗುಹಾ ಅವರನ್ನು ಪೊಲೀಸರು ಕರೆದೊಯ್ಯುತ್ತಿರುವುದು
ರಾಮಚಂದ್ರ ಗುಹಾ ಅವರನ್ನು ಪೊಲೀಸರು ಕರೆದೊಯ್ಯುತ್ತಿರುವುದು

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹಿನ್ನಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದ್ದು ಕಾಂಗ್ರೆಸ್ ಶಾಸಕ ರಿಜ್ವಾನ್ ಆರ್ಶದ್ ಮತ್ತು ಇತಿಹಾಸತಜ್ಞ ರಾಮಚಂದ್ರ ಗುಹಾ ವಿರುದ್ಧ ಕೇಸು ದಾಖಲಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.


ಇಂದು ರಾತ್ರಿಯವರೆಗೆ ನಗರದಲ್ಲಿ ಸೆಕ್ಷನ್ 144 ಜಾರಿಯಲ್ಲಿರುತ್ತದೆ. ಪ್ರತಿಭಟನೆ ಸಂಬಂಧ 24 ಜನರನ್ನು ಬಂಧಿಸಲಾಗಿದ್ದು 8 ಮಂದಿ ವಿರುದ್ಧ ಕೇಸು ದಾಖಲಾಗಿದೆ. ಶಾಸಕ ರಿಜ್ವಾನ್ ಆರ್ಶದ್ ಮತ್ತು ಇತಿಹಾಸತಜ್ಞ ರಾಮಚಂದ್ರ ಗುಹಾ ಅವರ ವಿರುದ್ಧ ಸಹ ಕೇಸು ದಾಖಲಿಸಲಾಗಿದೆ ಎಂದರು.


ನಿನ್ನೆಯ ಪ್ರತಿಭಟನೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ನಮ್ಮ ಪೊಲೀಸ್ ಸಿಬ್ಬಂದಿ ತಾಳ್ಮೆಯಿಂದ ಕರ್ತವ್ಯ ನಿರ್ವಹಿಸಿದ್ದಾರೆ. ವಿದ್ಯಾರ್ಥಿಗಳು ಸೇರಿದಂತೆ ಯಾರೂ ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಬೇಡಿ. ಕಾನೂನು ಉಲ್ಲಂಘಿಸಿದ ಕೇಸು ದಾಖಲಿಸುತ್ತೇವೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com