

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಭಾರತೀಯ ಮುಸ್ಲಿಂರಿಗೆ ಯಾವುದೇ ರೀತಿಯಲ್ಲೂ ತೊಂದರೆ ಆಗುವುದಿಲ್ಲ. ಇದು ಮೂರು ದೇಶಗಳ ಅಲ್ಪ ಸಂಖ್ಯಾತರಿಗೆ ಪೌರತ್ವ ಕೊಡುವ ಕಾನೂನು. ಇನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.
ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಇನ್ನು ಪೌರತ್ವ ಕಾಯ್ದೆ ಬಗ್ಗೆ ಮಾಹಿತಿ ಇಲ್ಲದೆ ವಿರೋಧ ವ್ಯಕ್ತಪಡಿಸಲಾಗುತ್ತಿದೆ. ಇದು ಭಾರತದ ಮುಸ್ಲಿಂರ ಪೌರತ್ವ ಕಸಿಯುವ ಕಾನೂನು ಅಲ್ಲ ಎಂದರು.
ಅಡ್ವಕೇಟ್ಸ್ ಫರ್ ನೇಷನ್ಸ್ ವತಿಯಿಂದ ವಿಚಾರ ಸಂಕೀರ್ಣವನ್ನು ಬೆಂಗಳೂರಿನ ಯವನಿಕ ಆಡಿಟೋರಿಯಂನಲ್ಲಿ ಆಯೋಜಿಸಲಾಗಿತ್ತು. ಈ ವೇಳೆ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಂ, ಹಿರಿಯ ವಕೀಲ ಬಿವಿ ಆಚಾರ್ಯ, ಉಪ ಲೋಕಾಯುಕ್ತ ಸುಭಾಷ್ ಅಡಿ ಸೇರಿದಂತೆ ನೂರಾರು ಸಾರ್ವಜನಿಕರು ಭಾಗಿಯಾಗಿದ್ದರು.
ಈ ವೇಳೆ ತೇಜಸ್ವಿ ಸೂರ್ಯ ಮಾಡನಾಡಿ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ತಪ್ಪ ಮಾಹಿತಿ ನೀಡಲಾಗುತ್ತಿದೆ. ಈ ಕಾಯ್ದೆಯ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು. ಪೌರತ್ವ ತಿದ್ದುಪಡಿ ಮಸೂದೆ ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಸಿಂಧುತ್ವ ಪರೀಕ್ಷೆಯಲ್ಲಿ ಪಾಸಾಗಲಿದೆ ಎಂದರು.