ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿ ಮಾಡದೆ, ಶಾಂತಿ ಕಾಪಾಡಿ: ಲಕ್ಷ್ಮಣ ಸವದಿ

ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ನಡೆಯುತ್ತಿರುವ ಪ್ರತಿಭಟನೆಗಳು ಹಿಂಸಾರೂಪ ತಳೆದಿದ್ದು, ಸಾರ್ವಜನಿಕರ ಆಸ್ತಿಪಾಸ್ತಿಗೆ ಅಪಾರ ನಷ್ಟವಾಗುತ್ತಿದ್ದು, ಶಾಂತಿಯುತ ಪ್ರತಿಭಟನೆ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಯಾವುದೇ ಹಾನಿ ಮಾಡದಂತೆ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಾರಿಗೆ ಲಕ್ಷ್ಮಣ ಸವದಿ ಮನವಿ ಮಾಡಿದ್ದಾರೆ.
ಲಕ್ಷ್ಮಣ ಸವದಿ
ಲಕ್ಷ್ಮಣ ಸವದಿ
Updated on: 

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ನಡೆಯುತ್ತಿರುವ ಪ್ರತಿಭಟನೆಗಳು ಹಿಂಸಾರೂಪ ತಳೆದಿದ್ದು, ಸಾರ್ವಜನಿಕರ ಆಸ್ತಿಪಾಸ್ತಿಗೆ ಅಪಾರ ನಷ್ಟವಾಗುತ್ತಿದ್ದು, ಶಾಂತಿಯುತ ಪ್ರತಿಭಟನೆ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಯಾವುದೇ ಹಾನಿ ಮಾಡದಂತೆ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಾರಿಗೆ ಲಕ್ಷ್ಮಣ ಸವದಿ ಮನವಿ ಮಾಡಿದ್ದಾರೆ.

ಬೆಂಗಳೂರಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿ, ಅಹವಾಲು ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾಡಿದ ಅವರು, ರಾಷ್ಟ್ರದಲ್ಲಿ ಭದ್ರತೆ ಮತ್ತು ಏಕತೆಗಾಗಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರಲಾಗಿದೆ. 

ಆದರೆ, ಕಾಯ್ದೆ ಕುರಿತು ಕೆಲವರು ತಪ್ಪು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಕಾಂಗ್ರೆಸ್‍ನ ಯು.ಟಿ.ಖಾದರ್ ಅವರು ಹಿಂಸೆಗೆ ಪ್ರಚೋದನೆ ನೀಡಿ, ಹಿಂಸಾಚಾರ ತೀವ್ರ ರೂಪ ಪಡೆಯಲು ಕಾರಣರಾಗಿದ್ದಾರೆ ಎಂದು ಹೇಳಿದರು.

ಯಾವುದೇ ಪ್ರತಿಭಟನೆ ನಡೆಸಲು ಜನರಿಗೆ ಹಕ್ಕಿದೆ. ಆದರೆ ಶಾಂತಿಯುತ ಪ್ರತಿಭಟನೆ ಮೂಲಕ ತಮ್ಮ ಬೇಡಿಕೆಗಳನ್ನು ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಸಲ್ಲಿಸಬೇಕು. ಸಾರ್ವಜನಿಕ ಆಸ್ತಿ-ಪಾಸ್ತಿಗೆ ನಷ್ಟವಾದರೆ, ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗುತ್ತದೆ. 

ಅಂತಿಮವಾಗಿ ಇದು ಸಾರ್ವಜನಿಕರ ಮೇಲೆ ಹೊರೆ ಬೀಳುತ್ತದೆ. ಈ ನಿಟ್ಟಿನಲ್ಲಿ ರಾಷ್ಟ್ರದ ಹಿತದೃಷ್ಟಿಯಿಂದ ನಾವೆಲ್ಲರೂ ಶಾಂತಿ-ಸುವ್ಯವಸ್ಥೆ ಕಾಪಾಡುಲು ಕೈಜೋಡಿಸಬೇಕು ಎಂದು ಸಚಿವರು ಮನವಿ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com