ಉಡುಪಿ: ಕೆಎಂಸಿ ಆಸ್ಪತ್ರೆಗೆ ಭೇಟಿ ನೀಡಿ ಪೇಜಾವರ ಶ್ರೀ ಆರೋಗ್ಯ ವಿಚಾರಿಸಿದ ಸಿಎಂ ಯಡಿಯೂರಪ್ಪ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಶನಿವಾರ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಭೇಟಿ ನೀಡಿ, ತೀವ್ರ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಉಡುಪಿ  ಪೇಜಾವರ ಮಠಾಧೀಶ ವಿಶ್ವೇಶ ತೀರ್ಥ ಶ್ರೀಗಳ ಆರೋಗ್ಯ ವಿಚಾರಿಸಿದರು.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
Updated on

ಉಡುಪಿ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಶನಿವಾರ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಭೇಟಿ ನೀಡಿ, ತೀವ್ರ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಉಡುಪಿ  ಪೇಜಾವರ ಮಠಾಧೀಶ ವಿಶ್ವೇಶ ತೀರ್ಥ ಶ್ರೀಗಳ ಆರೋಗ್ಯ ವಿಚಾರಿಸಿದರು.
 
ಮಂಗಳೂರಿಂದ ಹೆಲಿಕಾಪ್ಟರ್ ಮೂಲಕ ಉಡುಪಿಗೆ ಆಗಮಿಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಸ್ತೆಯ ಮೂಲಕ  ಆಸ್ಪತ್ರೆ ತಲುಪಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಂಸದೆ ಶೋಭಾ ಕರಂದ್ಲಾಜೆ, ಉಡುಪಿ ಶಾಸಕ ರಘುಪತಿ ಭಟ್ ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳೊಂದಿಗಿದ್ದರು.
 
ಅಸ್ವಸ್ಥಗೊಂಡಿರುವ  ಪೇಜಾವರ ಶ್ರೀಗಳಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುಗುತ್ತಿದೆ. ಶ್ರೀಗಳಿಗೆ ಕೃತಕ ಉಸಿರಾಟ ವ್ಯವಸ್ಥೆ ಕಲ್ಪಿಸಲಾಗಿದೆ. ಚಿಕಿತ್ಸೆಗೆ  ಶ್ರೀಗಳು ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com