ಪ್ರತಿಭಟನೆ, ಹಿಂಸಾಚಾರದ ಬಳಿಕ ಸಹಜ ಸ್ಥಿತಿಯತ್ತ ಮಂಗಳೂರು

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಹಿಂಸಾತ್ಮಕ ಪ್ರತಿಭಟನೆಯಿಂದ ಉದ್ವಿಗ್ನಗೊಂಡಿದ್ದ ಮಂಗಳೂರು ಇದೀಗ ಸಹಜ ಸ್ಥಿತಿಯತ್ತ ಮರಳುತ್ತಿದೆ. 
ಮಂಗಳೂರು ಹಿಂಸಾಚಾರ
ಮಂಗಳೂರು ಹಿಂಸಾಚಾರ

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಹಿಂಸಾತ್ಮಕ ಪ್ರತಿಭಟನೆಯಿಂದ ಉದ್ವಿಗ್ನಗೊಂಡಿದ್ದ ಮಂಗಳೂರು ಇದೀಗ ಸಹಜ ಸ್ಥಿತಿಯತ್ತ ಮರಳುತ್ತಿದೆ. 

ಕರ್ಫ್ಯೂ ಜಾರಿಯಲ್ಲಿದ್ದ ಮಂಗಳೂರು ಮಾತ್ರವಲ್ಲದೆ ಇಡೀ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಯಾವುದೇ ಅಹಿತಕರ ಘಟನೆಗಳಿಲ್ಲದೆ ಪರಿಸ್ಥಿತಿ ಬಹುತೇಕ ಶಾಂತವಾಗಿತ್ತು. 

ಮುಖ್ಯಮಂತ್ರಿ ಯಡಿಯೂರಪ್ಪ ಅವರೂ ಕೂಡ ಮಂಗಳೂರಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಅವರ ಸೂಚನೆಯಂತೆ ಭಾನುವಾರ ಬೆಳಿಗ್ಗೆ 6 ರಿಂದ ಸಂಜೆ 6ಗಂಟೆಗಳ ವರೆಗೆ ಕರ್ಫ್ಯೂ ಸಡಿಲಿಸಲು ನಿರ್ಧರಿಸಲಾಗಿದೆ. ಸೋಮವಾರದಿಂದ ಮಂಗಳೂರು ನಗರದಲ್ಲಿ ನಾಲ್ಕು ದಿನಗಳಿಂದ ಹೇರಲಾಗಿದ್ದ ಕರ್ಫ್ಯೂ ತೆರವುಗೊಳ್ಳಲಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com