ಪೌರತ್ವ ಕಿಚ್ಚು: ಬೆಂಗಳೂರಿನಲ್ಲಿ ಸೋಮವಾರ ಬೃಹತ್ ಪ್ರತಿಭಟನೆ, ಬಿಗಿ ಭದ್ರತೆ

ಪೌರತ್ವ ತಿದ್ದುಪಡಿ ಕಾಯ್ದೆ  ವಿರೋಧಿಸಿ ಸೋಮವಾರ ವಿವಿಧ ಸಂಘಟನೆಗಳು  ಪ್ರತಿಭಟನೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಭಾರಿ ಬಿಗಿ ಭದ್ರತೆ ಕಲ್ಪಿಸಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ  ವಿರೋಧಿಸಿ ಸೋಮವಾರ ವಿವಿಧ ಸಂಘಟನೆಗಳು  ಪ್ರತಿಭಟನೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಭಾರಿ ಬಿಗಿ ಭದ್ರತೆ ಕಲ್ಪಿಸಲಾಗಿದೆ.

ನಾಳಿನ ಪ್ರತಿಭಟನೆ ಹಿನ್ನೆಲೆಯಲ್ಲಿ ಗೃಹಸಚಿವರ ಜೊತೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾದ ಪೊಲೀಸ್ ಮಹಾನಿರ್ದೇಶಕಿ ನೀಲಾಮಣಿ ರಾಜು ಕಾನೂನು ಸುವ್ಯವಸ್ಥೆ, ಭದ್ರತೆ ಕುರಿತಂತೆ ಚರ್ಚೆ ನಡೆಸಿದ್ದಾರೆ.

ಪ್ರತಿಭಟನೆಯಲ್ಲಿ ಸುಮಾರು 1 ಲಕ್ಷಕ್ಕಿಂತ ಹೆಚ್ಚು ಮುಸ್ಲಿಂ  ಬಾಂಧವರು ಭಾಗಿಯಾಗುವ ನಿರೀಕ್ಷೆ ಇದೆ. ಹೀಗಾಗಿ ಬಿಗಿ ಭದ್ರತೆ ಕಲ್ಪಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದಾರೆ.

ಪೌರತ್ವ ಕಾಯ್ದೆ ವಿಚಾರವಾಗಿ  ಪುಲಿಕೇಶಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಖುದೂಸ್ ಸಾಬ್ ಈದ್ಗಾ ಮೈದಾನದಲ್ಲಿ 35ಕ್ಕೂ ಸಂಘಟನೆಗಳಿಂದ ಕೋಮು ಸೌಹಾರ್ದ ಸಭೆ ಏರ್ಪಡಿಸಲಾಗಿದ್ದು, ಯಾವುದೇ ಅಹಿತರ ಘಟನೆ ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. 

ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಹಲವೆಡೆ ಸಂಚಾರ ನಿರ್ಬಂಧ ಮಾಡಲಾಗಿದೆ.  ಕೆಲವೆಡೆ ಸಂಚಾರ ಬದಲು ಮಾಡಲಾಗಿದೆ.  ನಾಗವಾರ, ವಿಜಯನಗರ, ಬನ್ನೇರುಘಟ್ಟ, ರಾಜಾಜಿನಗರ, ತಿಲಕ್ ನಗರ, ಮಾಗಡಿ, ರಸ್ತೆ, ಕಾಮಾಕ್ಷಿಪಾಳ್ಯ ಮತ್ತಿತರ ಕಡೆಗಳಲ್ಲಿ  ಸಂಚಾರ ಮಾರ್ಗ ಬದಲು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. 

ಸುಮಾರು 1 ಸಾವಿರ ಸಿಸಿಟಿವಿ ಕ್ಯಾಮರಾ ಅಳವಡಿಕೆ, ಅಗ್ನಿಶಾಮಕ ದಳ ಸೇರಿದಂತೆ ವಿವಿಧ ಕ್ರಮಗಳನ್ನು ಕೈಗೊಳ್ಳಲಾಗಿದೆ. ಒಂದು ವೇಳೆ ಯಾವುದೇ ಅಹಿತಕರ ಘಟನೆ ನಡೆದರೆ ಆಯೋಜಕರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com