ಡಾ. ಡಿ. ವೀರೇಂದ್ರ ಹೆಗ್ಗಡೆ
ರಾಜ್ಯ
ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಗೆ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ
ಬೆಂಗಳೂರು ಪ್ರೆಸ್ ಕ್ಲಬ್ ನೀಡುವ ವಾರ್ಷಿಕ ಪ್ರಶಸ್ತಿಯಾದ "ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ" ಪ್ರಶಸ್ತಿಗೆ ಈ ಬಾರಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಪಾತ್ರರಾಗಿದ್ದಾರೆ.
ಬೆಂಗಳುರು: ಬೆಂಗಳೂರು ಪ್ರೆಸ್ ಕ್ಲಬ್ ನೀಡುವ ವಾರ್ಷಿಕ ಪ್ರಶಸ್ತಿಯಾದ "ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ" ಪ್ರಶಸ್ತಿಗೆ ಈ ಬಾರಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಪಾತ್ರರಾಗಿದ್ದಾರೆ.
ಡಿಸೆಂಬರ್ ೩೧ರಂದು ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾಗವಹಿಸಲಿದ್ದು ಪ್ರಶಸ್ತಿ ಪುರಸ್ಕೃತರಿಗೆ ಬಹುಮಾನ ವಿತರಿಸಲಿದ್ದಾರೆ. ಡಿಸಿಎಂ ಗಳಾದ ಡಾ. ಸಿ.ಎನ್. ಅಶ್ವಥ್ ನಾರಾಯಣ, ಲಕ್ಷ್ಮಣ ಸವದಿ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಇದಲ್ಲದೆ ೨೦೧೯ರ ಸಾಲಿನ ಪ್ರಶಸ್ತಿಗಳಿಗಾಗಿ ಹಿರಿಯ ಪೊಅತ್ರಕರ್ತರಾದ ಎಂ. ಸಿದ್ದರಾಜು, ಕೆ. ಸುನೀಲ್ ಪ್ರಸಾದ್, ರವೀಂದರ್ ಜಿ. ಭಟ್, ಎಂ ಅಬ್ದುಲ್ ಹಮೀದ್ ಸೇರಿ ಹಲವರನ್ನು ಆಯ್ಕೆ ಮಾಡಿರುವುದಾಗಿ ಪ್ರೆಸ್ ಕ್ಲಬ್ ಪ್ರಕಟಣೆ ಹೇಳಿದೆ.


