ಕಮ್ಯೂನಿಸ್ಟ್ ಪಕ್ಷದ ಕಚೇರಿ ಎದುರು ನಿಲ್ಲಿಸಿದ್ದ ಬೈಕ್ ಗಳಿಗೆ ಬೆಂಕಿ; ಪ್ರತೀಕಾರಕ್ಕಾಗಿ ಕೃತ್ಯ ಶಂಕೆ

ನಗರದ ಕಮ್ಯೂನಿಸ್ಟ್‌ ಪಕ್ಷದ ಕಚೇರಿ ಎದುರು ನಿಲ್ಲಿಸಿದ ಬೈಕ್ ಗಳಿಗೆ ಬೆಂಕಿ ಹಚ್ಚಿ, ಕಿಡಿಗೇಡಿಗಳು ಪರಾರಿಯಾಗಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ನಗರದ ಕಮ್ಯೂನಿಸ್ಟ್‌ ಪಕ್ಷದ ಕಚೇರಿ ಎದುರು ನಿಲ್ಲಿಸಿದ ಬೈಕ್ ಗಳಿಗೆ ಬೆಂಕಿ ಹಚ್ಚಿ, ಕಿಡಿಗೇಡಿಗಳು ಪರಾರಿಯಾಗಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.

ನಿನ್ನೆ ರಾತ್ರಿ 1 ಗಂಟೆ ಸುಮಾರಿಗೆ ಬೈಕ್ ನಲ್ಲಿ ಬಂದ ನಾಲ್ಕು ಜನರು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ.

ಬೈಕ್ ನಲ್ಲಿ ಬಂದ ಕಿಡಿಗೇಡಿಗಳು ಬಾಟಲಿಯೊಂದರಲ್ಲಿ ಪೆಟ್ರೋಲ್ ತುಂಬಿಕೊಂಡು ಬಂದಿದ್ದರು. ಕಚೇರಿ ಎದುರು ನಿಲ್ಲಿಸಿದ್ದ ಬೈಕ್ ಹಾಗೂ ಕೆಂಪು ಬಣ್ಣದ ಗೇಟ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಂಚಿದ್ದಾರೆ ಎನ್ನಲಾಗಿದೆ.

ಘಟನೆ ಕುರಿತು ಡಿಸಿಪಿ ಚೇತನ್ ಸಿಂಗ್ ರಾಥೋರ್ ಪ್ರತಿಕ್ರಿಯೆ ನೀಡಿದ್ದಾರೆ. ಸಿಪಿಐ ಕಛೇರಿ ಆವರಣದಲ್ಲಿದ್ದ ಆರು ಬೈಕ್ ಗಳಿಗೆ ಬೆಂಕಿ ಇಡಲಾಗಿದೆ. ಪೆಟ್ರೋಲ್ ಹಾಕಿ ಬೆಂಕಿ ಇಟ್ಟಿದ್ದಾರೆ. ಯಾರೋ ದುಷ್ಕರ್ಮಿ ಗಳು ಬೈಕ್ ನಲ್ಲಿ ಬಂದು ತಡರಾತ್ರಿ ಒಂದು ಗಂಟೆ ಸಮಯದಲ್ಲಿ ಈ ಕೃತ್ಯ ಎಸಗಿದ್ದಾರೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com