ಕಲಬುರಗಿ: ಮಾಲ್ ನಲ್ಲೇ ಸೀಮೆಎಣ್ಣೆ ಸುರಿದುಕೊಂಡು ಯುವತಿ ಆತ್ಮಹತ್ಯೆ

ನಗರದ ಸಿಟಿ ಸೆಂಟರ್ ಮಾಲ್‌ನಲ್ಲಿ ಸೀಮೆಎಣ್ಣೆ ಸುರಿದುಕೊಂಡು ಯುವತಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳವಾರ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಕಲಬುರಗಿ: ನಗರದ ಸಿಟಿ ಸೆಂಟರ್ ಮಾಲ್‌ನಲ್ಲಿ ಸೀಮೆಎಣ್ಣೆ ಸುರಿದುಕೊಂಡು ಯುವತಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳವಾರ ನಡೆದಿದೆ.

ನಗರದ ಸೂಪರ್ ಮಾರ್ಕೆಟ್ ರಸ್ತೆಯಲ್ಲಿರುವ ಸಿಟಿ ಸೆಂಟರ್ ಮಾಲ್ ನಲ್ಲಿ ಈ ಘಟನೆ ನಡೆದಿದೆ.

ನಗರದ ಎಂಎಸ್ ಕೆ ನಿವಾಸಿ ನಾಗರತ್ನ ಹಿರೇಮಠ್ (20) ಮೃತ ಯುವತಿ.

ಮಾಲ್‌ನಲ್ಲಿರುವ ವಿಜಯಲಕ್ಷ್ಮಿ ಸಾರಿ ಸೆಂಟರ್‌ನಲ್ಲಿ ಮೃತ ನಾಗರತ್ನ‌ ಕೆಲಸ ಮಾಡಿಕೊಂಡಿದ್ದರು. ಶಾಪ್‌ನ ಶೌಚಾಲಯದಲ್ಲೇ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಘಟನೆ ಸಂಬಂಧಿಸಿದಂತೆ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com