ಬೆಂಗಳೂರು: ಸಿಪಿಐ ಕಚೇರಿ ಮೇಲೆ ದಾಳಿ, 2 ಬೈಕ್ ಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ನಗರದ ವೈಯಾಲಿಕಾವಲ್ ನಲ್ಲಿರುವ ಕಮ್ಯೂನಿಸ್ಟ್ ಪಕ್ಷದ (ಸಿಪಿಐ) ಕಚೇರಿ ಆವರಣದಲ್ಲಿ ಕಿಡಿಗೇಡಿಗಳು ದಾಳಿ ನಡೆಸಿದ್ದು, ಈ ವೇಳೆ ಸ್ಥಳದಲ್ಲಿದ್ದ ದ್ವಿಚಕ್ರ ವಾಹನಗಳು ಹಾಗೂ ಕಚೇರಿಯ ಪ್ರವೇಶ ದ್ವಾರಕ್ಕೆ ಬೆಂಕಿ ಹಚ್ಚಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. 
ಬೆಂಗಳೂರು: ಸಿಪಿಐ ಕಚೇರಿ ಮೇಲೆ ದಾಳಿ, 2 ಬೈಕ್ ಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
ಬೆಂಗಳೂರು: ಸಿಪಿಐ ಕಚೇರಿ ಮೇಲೆ ದಾಳಿ, 2 ಬೈಕ್ ಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಬೆಂಗಳೂರು: ನಗರದ ವೈಯಾಲಿಕಾವಲ್ ನಲ್ಲಿರುವ ಕಮ್ಯೂನಿಸ್ಟ್ ಪಕ್ಷದ (ಸಿಪಿಐ) ಕಚೇರಿ ಆವರಣದಲ್ಲಿ ಕಿಡಿಗೇಡಿಗಳು ದಾಳಿ ನಡೆಸಿದ್ದು, ಈ ವೇಳೆ ಸ್ಥಳದಲ್ಲಿದ್ದ ದ್ವಿಚಕ್ರ ವಾಹನಗಳು ಹಾಗೂ ಕಚೇರಿಯ ಪ್ರವೇಶ ದ್ವಾರಕ್ಕೆ ಬೆಂಕಿ ಹಚ್ಚಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. 

ಈ ಸಂಬಂಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. 

ದಾಳಿ ಖಂಡಿಸಿ ಸಿಪಿಐ ಕಾರ್ಯಕರ್ತರು ಬುಧವಾರ ಮಲ್ಲೇಶ್ವರದ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದು, ಆರೋಪಿಗಲನ್ನು ಶೀಘ್ರಗತಿಯಲ್ಲಿ ಬಂಧನಕ್ಕೊಳಪಡಿಸುವಂತೆ ಆಗ್ರಹಿಸಿದ್ದಾರೆ. 

ಬೈಕ್ ನಲ್ಲಿ ಬಂದಿರುವ ದುಷ್ಕರ್ಮಗಿಳು ಕೃತ್ಯ ಎಸಗಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. 

ವೈಯಾಲಿಕಾವಲ್ ನಲ್ಲಿರುವ ಸಿಪಿಐ ಕಚೇರಿಗೆ ಭದ್ರತಾ ಸಿಬ್ಬದಿಗಳಿದ್ದು, ಭದ್ರತಾ ಸಿಬ್ಬಂದಿಯ ಕುಟುಂಬ ನೆಲೆಸಲು ಅಲ್ಲಿಯೇ ಕೊಠಡಿ ವ್ಯವಸ್ಥೆಯನ್ನೂ ಮಾಡಲಾಗಿದೆ. ಮಂಗಲವಾರ ತಡರಾತ್ರಿ ಒಂದು ಗಂಟೆ ಸುಮಾರಿಗೆ ಬೈಕ್ ನಲ್ಲಿ ಬಂದಿರುವ ನಾಲ್ವರು ದುಷ್ಕರ್ಮಿಗಳು ಕಚೇರಿಯ ಕಬ್ಬಿಣದ ಮುಂಬಾಗಿಲು ಹಾಗೂ ಆವರಣದಲ್ಲಿ ನಿಲುಗಡೆ ಮಾಡಲಾಗಿದ್ದ ದ್ವಿಚಕ್ರ ವಾಹನಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. 

ಪರಿಣಾಮ ಎರಡು ವಾಹನಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ನಾಲ್ಕು ವಾಹನಗಳು ಹಾನಿಗೊಳಗಾಗಿದೆ. ಇನ್ನು ಕಬ್ಬಿಣದ ಬಾಗಿಲೂ ಕೂಡ ಸ್ವಲ್ಪ ಪ್ರಮಾಣದಲ್ಲಿ ಸುಟ್ಟಿದೆ. ಬೆಂಕಿಯ ಕೆನ್ನಾಲಿಗೆಯಿಂದಾಗಿ ಎಚ್ಚೆತ್ತ ಭದ್ರತಾ ಸಿಬ್ಬಂದಿ ಕೂಡಲೇ ಅಗ್ನಿಶಾಮಕ ದಳ ಹಾಗೂ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಅಧಿಕಾರಿಗಳು ಬೆಂಕಿ ನಂದಿಸಿದ್ದಾರೆ. 

ಪಕ್ಷದ ಜಿಲ್ಲಾ ಸಹ ಕಾರ್ಯದರ್ಶಿ ಸತ್ಯಾನಂದ ಎಂಬುವವರು ಪ್ರಕರಣ ಸಂಬಂಧ ದೂರು ನೀಡಿದ್ದಾರೆ. ದುಷ್ಕರ್ಮಿಗಳು ಪೆಟ್ರೋಲ್ ತಂದಿದ್ದ ಬಾಟಲಿಗಳು ಕೂಡ ಸ್ಥಳದಲ್ಲಿಯೇ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com