ಎಂ.ಜಿ ರಸ್ತೆ,ಬ್ರಿಗೇಡ್ ರಸ್ತೆಗಳಲ್ಲಿ ಹೊಸ ವರ್ಷಾಚರಣೆಯ ಪಾರ್ಟಿ ನಿಷೇಧಿಸಿ- ಹಿಂದೂ ಜನಜಾಗೃತಿ ಸಮಿತಿ

ಡಿಸೆಂಬರ್ 31ರ ರಾತ್ರಿ ಬೆಂಗಳೂರಿನ ಎಂ.ಜಿ.ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ಹೊಸ ವರ್ಷದ ಆಚರಣೆಯ ಕಾರ್ಯಕ್ರಮ ನಿಷೇಧಿಸುವಂತೆ ಹಿಂದೂ ಜನ ಜಾಗೃತಿ ಸಮಿತಿ ಒತ್ತಾಯಿಸಿದೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಮಾದಕ ವಸ್ತು, ಡ್ರಗ್ಸ್ ಮಾಫಿಯಾಗಳಿಗೆ ಕಡಿವಾಣ ಹಾಕುವ ಮತ್ತು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದಂತಹ ಅಹಿತಕರ ಘಟನೆಗಳನ್ನು ತಡೆಯಲು ಡಿಸೆಂಬರ್ 31ರ ರಾತ್ರಿ ಬೆಂಗಳೂರಿನ ಎಂ.ಜಿ.ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ಹೊಸ ವರ್ಷದ ಆಚರಣೆಯ ಕಾರ್ಯಕ್ರಮ ನಿಷೇಧಿಸುವಂತೆ ಹಿಂದೂ ಜನ ಜಾಗೃತಿ ಸಮಿತಿ ಒತ್ತಾಯಿಸಿದೆ. 

ಹಿಂದೂ ಜನಜಾಗೃತಿ ಸಮಿತಿ ಅಧ್ಯಕ್ಷ ಮೋಹನ್‌ಗೌಡ ಮಾತನಾಡಿ, ಈ ಭಾಗದಲ್ಲಿ ಮದ್ಯಪಾನ, ಧೂಮಪಾನ ಮತ್ತು ಮಾದಕ ದ್ರವ್ಯ ಸೇವಿಸುವ ಪಾರ್ಟಿಗಳನ್ನು ನಿಷೇಧಿಸಬೇಕು ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್‌ರಾವ್ ಅವರಿಗೆ ದೂರು ಸಲ್ಲಿಸಲಾಗಿದೆ ಎಂದರು. 

ದೇಶಾದ್ಯಂತ ಪಾಶ್ಚಿಮಾತ್ಯ ಸಂಸ್ಕೃತಿ ಹೆಚ್ಚುತ್ತಿರುವ ಕಾರಣ ಅಪರಾಧ ಚಟುವಟಿಕೆಗಳು ತೀವ್ರಗೊಳ್ಳುತ್ತಿವೆ. ಡಿ 31  ರ ರಾತ್ರಿ ಹೊಸ ವರ್ಷ ಆಚರಿಸುವ ಕೆಟ್ಟ ಸಂಪ್ರದಾಯದಿಂದ ನಗರದ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಗಳಲ್ಲಿ ಅಹಿತಕರ ವಾತಾವರಣ ನಿರ್ಮಾಣವಾಗುತ್ತಿದೆ ಎಂದರು.

ಕಳೆದ ವರ್ಷ ಸಂಭ್ರಮಾಚರಣೆ ಸಂದರ್ಭದಲ್ಲಿ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯದಂತಹ ಅಪರಾಧಗಳು ನುಡೆದಿವೆ. ಹೀಗಾಗಿ ನಗರದ ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಶಾಂತಿ ವಾತಾವರಣ ನಿರ್ಮಾಣ ಮಾಡಲು ಸಂಭ್ರಮಾಚರಣೆಗೆ ಅವಕಾಶ ನೀಡಬಾರದು ಎಂದು ಕೋರಲಾಗಿದೆ ಎಂದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com