ಸಿಪಿಐ ಕಚೇರಿ ಮೇಲೆ ದಾಳಿ: ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಿ- ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

ಸಿಪಿಐ ಕಚೇರಿ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ. 
ಸಿದ್ದರಾಮಯ್ಯd
ಸಿದ್ದರಾಮಯ್ಯd
Updated on

ಬೆಂಗಳೂರು: ಸಿಪಿಐ ಕಚೇರಿ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ. 

ಮಲ್ಲೇಶ್ವರಂನ ವೈಯಾಲಿಕಾವಲ್ ನಲ್ಲಿದ್ದ ಸಿಪಿಐ ಕಚೇರಿ ಮೇಲೆ ಮಂಗಳವಾರ ತಡರಾತ್ರಿ ದುಷ್ಕರ್ಮಿಗಳ ಗುಂಪೊಂದು ದಾಳಿ ನಡೆಸಿ, ಸ್ಥಳದಲ್ಲಿದ್ದ ಬೈಕ್ ಗಳಿಗೆ ಬೆಂಕಿ ಹಚ್ಚಿದ್ದರು. 

ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಅವರು, ಸೈದ್ಧಾಂತಿಕ ವ್ಯತ್ಯಾಸಗಳನ್ನು ಒಪ್ಪಿಕೊಳ್ಳದವರು ಈ ದಾಳಿಯನ್ನು ನಡೆಸಿದ್ದಾರೆ. ಇದು ಅವರಲ್ಲಿರುವ ಹತಾಶೆಯನ್ನು ತೋರಿಸುತ್ತದೆ. ದಾಳಿ ನಡೆಸಿದ ದುಷ್ಕರ್ಮಿಗಳ ವಿರದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಶೀಘ್ರಗತಿಯಲ್ಲಿ ದುಷ್ಕರ್ಮಿಗಳು ಬಂಧನಕ್ಕೊಳಗಾಗಬೇಕೆಂದು ಆಗ್ರಹಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com