ಮಂಗಳೂರು ಹಿಂಸಾಚಾರ: ಮೃತರ ಪರಿಹಾರಕ್ಕೆ ತಡೆ- ಸ್ಪಷ್ಟನೆಗೆ ಖಾದರ್ ಆಗ್ರಹ

ಮಂಗಳೂರು ಗೋಲಿಬಾರ್ ನಲ್ಲಿ ಮೃತಪಟ್ಟಿದ್ದ ಕುಟುಂಬಸ್ಥರಿಗೆ ನೀಡಲಾಗಿದ್ದ ಪರಿಹಾರಕ್ಕೆ ರಾಜ್ಯ ಸರ್ಕಾರ ತಡೆ ನೀಡಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಮಂಗಳೂರು ಶಾಸಕ ಯುಟಿ ಖಾದರ್ ಅವರು ಆಗ್ರಹಿಸಿದ್ದಾರೆ. 
ಖಾದರ್
ಖಾದರ್

ಮಂಗಳೂರು: ಮಂಗಳೂರು ಗೋಲಿಬಾರ್ ನಲ್ಲಿ ಮೃತಪಟ್ಟಿದ್ದ ಕುಟುಂಬಸ್ಥರಿಗೆ ನೀಡಲಾಗಿದ್ದ ಪರಿಹಾರಕ್ಕೆ ರಾಜ್ಯ ಸರ್ಕಾರ ತಡೆ ನೀಡಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಮಂಗಳೂರು ಶಾಸಕ ಯುಟಿ ಖಾದರ್ ಅವರು ಆಗ್ರಹಿಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಮೃತರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರೂ.10 ಲಕ್ಷ ಪರಿಹಾರ ಘೋಷಣೆ ಮಾಡಿದ್ದರು. ಇದೀಗ ಪರಿಹಾರಕ್ಕೆ ತಡೆ ನೀಡಿದ್ದಾರೆ. ಯಾರ ಸಲಹೆ ಮೇರೆಗೆ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂಬುದನ್ನು ರಾಜ್ಯ ಸರ್ಕಾರ ಸ್ಪಷ್ಟಪಡಿಸಬೇಕು. ಪರಿಹಾರಕ್ಕೆ ತಡೆ ನೀಡಿರುವುದು ಮೃತರ ಕುಟುಂಬಕ್ಕೆ ಅವಮಾನ ಮಾಡಿದಂತೆ. ಯಡಿಯೂರಪ್ಪ ಕೂಡಲೇ ಈ ಕುರಿತು ಕ್ಷಮೆಯಾಚಿಸಬೇಕೆಂದು ಎಂದು ಹೇಳಿದ್ದಾರೆ.

ಈ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ಮುಲ್ಕಿಯಲ್ಲಿ ಗೋಲಿಬಾರ್ ನಡೆದಿತ್ತು. ಈ ವೇಳೆ ಮೃತರಿಗೆ ಪರಿಹಾರದೊಂದಿಗೆ ಗೌರವವನ್ನೂ ನೀಡಲಾಗಿತ್ತು. ಆದರೆ. ಈ ಬಾರಿ ಅದೇ ಸರ್ಕಾರ ಆಡಳಿತದಲ್ಲಿದ್ದರೂ ಸಾಕಷ್ಟು ಗೊಂದಲಗಳನ್ನು ಸೃಷ್ಟಿಸುತ್ತಿದೆ. ಈ ರೀತಿಯ ಘಟನೆಗಳು ಮರುಕಳಿಸಬಾರದು. ಜಿಲ್ಲಾ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರು ಶಾಂತಿಯುತ ಸಭೆ ನಡೆಸಬೇಕು ಎಂದು ತಿಳಿಸಿದ್ದಾರೆ. 

ರಾಜ್ಯದಲ್ಲಿ ಎನ್ಆರ್'ಸಿ ಜಾರಿಗೊಳಿಸಬಾರದು. ನಮ್ಮ ಸಂವಿಧಾನದ ಪ್ರಕಾರ 3 ರಾಜ್ಯಗಳ ಪೈಕಿ ಎರಡು ರಾಜ್ಯ ಕಾಯ್ದೆಗೆ ಒಪ್ಪಿಗೆ ಸೂಚಿಸಬೇಕು. ಆದರೆ, ಹಲವು ರಾಜ್ಯಗಳು ಎನ್ಆರ್'ಸಿಗೆ ವಿರೋಧ ವ್ಯಕ್ತಪಡಿಸುತ್ತಿವೆ. ಹೀಗಾಗಿ ಕಾಯ್ದೆಯನ್ನು ಜಾರಿಗೆ ತರಬಾರದು ಎಂದು ಹೇಳಿದ್ದಾರೆ.

ಇದೇ ವೇಳೆ ಗಲಭೆ ಸೃಷ್ಟಿಸಿದವರು ಆಸ್ತಿ ಜಪ್ತಿ ಮಾಡುವ ಸಿಟಿ ರವಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ರವಿಯವರು ಚಿಕ್ಕಮಗಳೂರು ಮೂಲದವರು. ಹೀಗಾಗಿ ಮಂಗಳೂರಿನ ಬಗ್ಗೆ ಮಾತನಾಡುವ ಅವಶ್ಯಕತೆ ಅವರಿಗಿಲ್ಲ. ಮಂಗಳೂರು ವಿಚಾರದ ಬಗ್ಗೆ ಇತರೆ ಜಿಲ್ಲೆಗಳ ಜನರ ಮಾತನಾಡುವ ಅಗತ್ಯವಿಲ್ಲ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com