ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಪ್ರಧಾನಿ ಮೋದಿ ಸರ್ವಪಕ್ಷ ಸಭೆ ನಡೆಸಬೇಕು: ಎ.ಹೆಚ್.ವಿಶ್ವನಾಥ್

ಪೌರತ್ವ ತಿದ್ದುಪಡಿ ಕಾಯ್ದೆಯು ಈ ದೇಶದ ರಾಷ್ಟ್ರೀಯ ಭದ್ರತೆ ಮತ್ತು ಭಾರತೀಯರಿಗೆ ಆದ್ಯತೆ ನೀಡಲು ಪೂರಕವಾಗಿದೆ. ಹೀಗಾಗಿ ವಿರೋಧ ಪಕ್ಷಗಳು, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಕುಮಾರಸ್ವಾಮಿ ಈ ವಿಚಾರದಲ್ಲಿ ಗೊಂದಲ ಮೂಡಿಸದೇ ಒಪ್ಪಿಕೊಳ್ಳುವಂತೆ ಮಾಜಿ ಸಚಿವ ಹೆಚ್.ವಿಶ್ವನಾಥ್ ಅವರು ಮನವಿ ಮಾಡಿಕೊಂಡಿದ್ದಾರೆ. 
ವಿಶ್ವನಾಥ್
ವಿಶ್ವನಾಥ್

ಮೈಸೂರು: ಪೌರತ್ವ ತಿದ್ದುಪಡಿ ಕಾಯ್ದೆಯು ಈ ದೇಶದ ರಾಷ್ಟ್ರೀಯ ಭದ್ರತೆ ಮತ್ತು ಭಾರತೀಯರಿಗೆ ಆದ್ಯತೆ ನೀಡಲು ಪೂರಕವಾಗಿದೆ. ಹೀಗಾಗಿ ವಿರೋಧ ಪಕ್ಷಗಳು, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಕುಮಾರಸ್ವಾಮಿ ಈ ವಿಚಾರದಲ್ಲಿ ಗೊಂದಲ ಮೂಡಿಸದೇ ಒಪ್ಪಿಕೊಳ್ಳುವಂತೆ ಮಾಜಿ ಸಚಿವ ಹೆಚ್.ವಿಶ್ವನಾಥ್ ಅವರು ಮನವಿ ಮಾಡಿಕೊಂಡಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಮುಸ್ಲಿಂ ಸಮುದಾಯದಲ್ಲಿ ಆತಂಕವಿರುವುದು ನಿಜ. ಹಾಗಂತ ಈ ಸರ್ಕಾರ ಮುಸ್ಲಿಮರಿಗೆ ಯಾವುದೇ ತೊಂದರೆ ನೀಡಿಲ್ಲ. ವಿರೋಧ ಪಕ್ಷಗಳು ಅಲ್ಪ ಸಂಖ್ಯಾತರನ್ನು ಕೆರಳಿಸಿ, ಉದ್ರಿಕ್ತಗೊಳಿಸಿರಾಜಕೀಯ ಲಾಭ ಮಾಡಬಾರದು ಎಂದು ಹೇಳಿದ್ದಾರೆ. 

ಕಾಯ್ದೆ ಅತ್ಯಂತ ಹಳೆದ ವಿಚಾರ. ಜನಾಹರ್ ಲಾಲ್ ನೆಹರು ಹಾಗೂ ಇಂದಿರಾ ಗಾಂಧಿಯವರು ಪ್ರಧಾನಮಂತ್ರಿಗಳಾಗಿದ್ದಾಲೂ ಪೌರತ್ವವನ್ನು ನೀಡಲಾಗಿತ್ತು. 1971-72ರಲ್ಲಿ ರಾಯಚೂರಿನ ಸಿಂಧನೂೂರಿಗೆ ಬಾಂಗ್ಲಾದೇಶದಿಂದ ನೂರಾರು ವಲಸಿಗರು ಬಂದಿದ್ದರು. ಆದರೆ, ಈ ಬಗ್ಗೆ ಜನರಲ್ಲಿ ಆತಂಕ ಸೃಷ್ಟಿಸುವ ಯತ್ನಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com