ಉಡುಪಿ: ವಿಶ್ವೇಶತೀರ್ಥ ಸ್ವಾಮೀಜಿ ಆರೋಗ್ಯ ಮತ್ತಷ್ಟು ಕ್ಷೀಣ- ಕೆಎಂಸಿ ಆಸ್ಪತ್ರೆ ಹೆಲ್ತ್ ಬುಲೆಟಿನ್ 

ಪೇಜಾವರ ಮಠದ ಶ್ರೀಗಳ ಆರೋಗ್ಯ ಮತ್ತಷ್ಟು ಕ್ಷೀಣಿಸಿದ್ದು, ಅವರ  ಪ್ರಜ್ಞೆಯ ಸ್ಥಿತಿಯಲ್ಲಿ ಯಾವುದೇ ಸುಧಾರಣೆಯಾಗಿಲ್ಲ ಎಂದು ಕೆಎಂಸಿ ಆಸ್ಪತ್ರೆಯಿಂದ ಬಿಡುಗಡೆಯಾದ ಹೆಲ್ತ್ ಬುಲೆಟಿನ್ ನಲ್ಲಿ ವೈದ್ಯರು ತಿಳಿಸಿದ್ದಾರೆ. 
ಪೇಜಾವರ ಶ್ರೀ
ಪೇಜಾವರ ಶ್ರೀ

ಉಡುಪಿ: ಪೇಜಾವರ ಮಠದ ಶ್ರೀಗಳ ಆರೋಗ್ಯ ಮತ್ತಷ್ಟು ಕ್ಷೀಣಿಸಿದ್ದು, ಅವರ  ಪ್ರಜ್ಞೆಯ ಸ್ಥಿತಿಯಲ್ಲಿ ಯಾವುದೇ ಸುಧಾರಣೆಯಾಗಿಲ್ಲ ಎಂದು ಕೆಎಂಸಿ ಆಸ್ಪತ್ರೆಯಿಂದ ಬಿಡುಗಡೆಯಾದ ಹೆಲ್ತ್ ಬುಲೆಟಿನ್ ನಲ್ಲಿ ವೈದ್ಯರು ತಿಳಿಸಿದ್ದಾರೆ. 

ವಿಶ್ವೇಶತೀರ್ಥ ಸ್ವಾಮೀಜಿ ಜೀವ ರಕ್ಷಕ ಸಾಧನಗಳ ಸಹಾಯದಲ್ಲಿದ್ದಾರೆ. ವೆಂಟಿಲೇಟರ್ ಮೂಲಕ ಉಸಿರಾಡುತ್ತಿದ್ದಾರೆ. ನಿನ್ನೆಯಿಂದ ಅವರ ಆರೋಗ್ಯದಲ್ಲಿ ಮತ್ತಷ್ಟು ಇಳಿಮುಖವಾಗಿದೆ ಎಂದು ತಿಳಿಸಲಾಗಿದೆ.

ಬೆಂಗಳೂರಿನ ಮಣಿಪಾಲ ಆಸ್ಪತ್ರೆಯ ತಜ್ಞರ ನೆರವಿನ ಜೊತೆಗೆ ದೆಹಲಿಯ ಏಮ್ಸ್  ತಜ್ಞ ವೈದ್ಯರ ಸಲಹೆ ಸೂಚನೆಗಳ ಮೇರೆಗೆ ಚಿಕಿತ್ಸೆ ಮುಂದುವರೆದಿದೆ. ಡಿಸೆಂಬರ್ 20 ರದು ಪೇಜಾವರ ಶ್ರೀಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com