ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸದಿದ್ದರೆ, ಅದು ಸಂವಿಧಾನಕ್ಕೆ ಮಾಡಿದ ಅವಮಾನ: ಬಿಜೆಪಿ

ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸದಿದ್ದರೆ, ಅದು ಸಂವಿಧಾನಕ್ಕೆ ಮಾಡಿದ ಅವಮಾನವಾಗುತ್ತದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಡಾ.ಅನಿಲ್ ಜೈನ್ ಅವರು ಶುಕ್ರವಾರ ಹೇಳಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸದಿದ್ದರೆ, ಅದು ಸಂವಿಧಾನಕ್ಕೆ ಮಾಡಿದ ಅವಮಾನವಾಗುತ್ತದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಡಾ.ಅನಿಲ್ ಜೈನ್ ಅವರು ಶುಕ್ರವಾರ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸದಿದ್ದರೆ, ಅದು ಸಂವಿಧಾನ, ರಾಷ್ಟ್ರಪತಿಗಳು ಹಾಗೂ ಸಂಸತ್ತಿಗೆ ಮಾಡಿದ ಅವಮಾನವಾಗುತ್ತದೆ ಎಂದು ಹೇಳಿದ್ದಾರೆ. 

ಕೆಲ ಬಿಜೆಪಿ ಆಡಳಿತವಿಲ್ಲದ ರಾಜ್ಯಗಳು ಪೌರತ್ವ ಕಾಯ್ದೆ ಜಾರಿಗೊಳಿಸುವುದಿಲ್ಲ ಎಂದು ಹೇಳುತ್ತಿವೆ. ಸಂಸತ್ತಿನಲ್ಲಿ ಅನುಮೋದನೆ ಪಡೆದು ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಕಾಯ್ದೆಗೆ ರಾಷ್ಟ್ರಪತಿಗಳ ಅನುಮೋದನೆ ಕೂಡ ದೊರಕಿದೆ. ಪೌರತ್ವ ಕಾಯ್ದೆ ಜಾರಿಗೊಳಿಸುವುದಿಲ್ಲ ಎಂದು ಹೇಳಿದರೆ, ಅದು ಸಂವಿಧಾನಕ್ಕೆ ಮಾಡಿದ ಅವಮಾನವಾಗುತ್ತದೆ ಎಂದು ತಿಳಿಸಿದ್ದಾರೆ. 

ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳು ಕಾಯ್ದೆ ಕುರಿತು ಜನರಲ್ಲಿ ಗೊಂದಲ ಸೃಷ್ಟಿಸಲು ಯತ್ನಿಸುತ್ತಿವೆ. ಆದರೆ, ಅದರಲ್ಲಿ ಅವರು ವಿಫಲರಾಗುತ್ತಿದ್ದಾರೆ. ಇದೀಗ ಕಾಂಗ್ರೆಸ್ ಎನ್'ಪಿಆರ್ ವಿಚಾರ ತೆಗೆದುಕೊಂಡಿದೆ. ಪ್ರಧಾನಮಂತ್ರಿ ಹಾಗೂ ಬಿಜೆಪಿ ಸರ್ಕಾರ ತೆಗೆದುಕೊಳ್ಳುವ ವಿಚಾರಗಳ ಬಗ್ಗೆ ಕಾಂಗ್ರೆಸ್ ವಿರೋಧಿಸುತ್ತಲೇ ಇರುತ್ತದೆ. ಎನ್'ಪಿಆರ್'ನ್ನು ಮೊದಲು ಪ್ರಸ್ತಾಪಿಸಿದ್ದೇ ಯುಪಿಎ ಸರ್ಕಾರ. 2011ರಲ್ಲಿ ಈ ಬಗ್ಗೆ ಜನಗಣತಿ ಕೂಡ ನಡೆದಿದೆ. ಮುಂದಿನ ಜನಗಣತಿ 2021ರಲ್ಲಿ ನಡೆಯಲಿದೆ ಎಂದಿದ್ದಾರೆ. 

ಎನ್ಆರ್'ಸಿ ಹಾಗೂ ಎನ್'ಪಿಆರ್ ನಡುವೆ ಸಂಪರ್ಕವಿದೆ. ಎನ್ಆರ್'ಸಿ ಜಾರಿಗೆ ಬಂದಾಗ ಸೂಕ್ತ ಮಾರ್ಗದರ್ಶನಗಳನ್ನು ನೀಡಲಾಗಿದೆ. ಈ ವೇಳೆ ಚರ್ಚೆಗಳೂ ಕೂಡ ನಡೆಯಲಿವೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com